ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ.
ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ ಸಮೀಪದ ಸಬ್ಬತ್ತಿ ಕ್ರಾಸ್‌ನಲ್ಲಿರುವ ಮನೆಯೊಂದರಲ್ಲಿ ವಾಸವಾಗಿದ್ದರು. ನಂತರ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದ್ದು, ಜಗಳ ವಿಕೋಪಕ್ಕೆ ಹೋಗಿ ಲೋಕೇಶ ನಾಯ್ಕ ಪತ್ನಿಗೆ ಮಾರಕಾಸ್ತ್ರದಿಂದ ಹೊಡೆದಿದ್ದಾನೆ ಎಂದು ಹೇಳಲಾಗಿದೆ. ಅದು ಕುತ್ತಿಗೆಗೆ ತಾಗಿದ ಪರಿಣಾಮ ಕತ್ತು ಸೀಳಿde. ನಂತರ ಆತ ಅಲ್ಲಿಂದ ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡ ಪತ್ನಿ ಮನೆಯಿಂದ ಹೊರಗೆ ಓಡಿಬಂದಿದ್ದಾಳೆ, ಆದರೆ ಕುಸಿದುಬಿದ್ದಿದ್ದಾಳೆ ಎಂದು ವರದಿಯಾಗಿದೆ.
ಇದನ್ನು ನೋಡಿದ ಅಕ್ಕಪಕ್ಕದವರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.. ಬಳಿಕ ಆರೋಪಿ ಪತಿ ಲೋಕೇಶ ನಾಯ್ಕ‌ನನ್ನು ಖಾಸಗಿ ಹೋಟೆಲೊಂದರಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕೇಶ ನಾಯ್ಕ ಶಿಲ್ಪಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement