ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ : ಕಾಂಗ್ರೆಸ್​ ಸಚಿವರ ಹೆಸರು ಪ್ರಸ್ತಾಪ

ಕಲಬುರಗಿ: ಸಚಿವ ಶರಣಪ್ರಕಾಶ ಪಾಟೀಲ ಅವರಿಂದ ಕಿರುಕುಳಕ್ಕೊಳಗಾಗಿದ್ದೇನೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಶಿವಕುಮಾರ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಕಾರ್ಯಕರ್ತ. ನನ್ನ ಸಂಬಂಧಿ ನರಸಪ್ಪ ಎಂಬವರ ಹೊಲಕ್ಕೆ ಹೋಗಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದೇನೆ ಎಂದು ಆತ್ಮಹತ್ಯೆಗೂ ಮುನ್ನ ಶಿವಕುಮಾರ ಆಡಿಯೋದಲ್ಲಿ ಹೇಳಿದ್ದಾರೆ.
ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಅವರು ತನ್ನ ಸಾವಿಗೆ ಸಚಿವ ಶರಣಪ್ರಕಾಶ ಪಾಟೀಲ ಕಾರಣ ಎಂದು ಆರೋಪಿಸಿದ್ದಾರೆ.
ಹಿಂದೂ ಧರ್ಮದ ಬಗ್ಗೆ ಎಲ್ಲಿಯೂ ಮಾತನಾಡಬಾರದು. ಮಾತಾಡಿದರೆ ಇವರಿಗೆ ಬೆಂಕಿ ಬಿಳುತ್ತದೆ. ಹಾಗಾಗಿ ನನ್ನ ಸಾವಿಗೆ ಕಾಂಗ್ರೆಸ್ ಕಾರ್ಯಕರ್ತರು, ಸಚಿವ ಶರಣಪ್ರಕಾಶ್ ಪಾಟೀಲ ಕಾರಣ ಎಂದು ಆರೋಪಿಸಿ ಆಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಆತನನ್ನು ಥಳಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement