ಯುಜಿಸಿಯಿಂದ ವಾಟ್ಸಪ್ ಚಾನೆಲ್ ಆರಂಭ

ನವದೆಹಲಿ: ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ಪಾಲುದಾರರೊಂದಿಗೆ ಸಂಪರ್ಕದಲ್ಲಿರಲು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಯುಜಿಸಿ ಇಂಡಿಯಾ ವಾಟ್ಸಾಪ್ ಚಾನೆಲ್ ಅನ್ನು ಪ್ರಾರಂಭಿಸಿದೆ. ಉನ್ನತ ಶಿಕ್ಷಣ ಸಂಸ್ಥೆಗಳು (HIE ಗಳು), ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಇತರರು ವಾಟ್ಸಾಪ್ ಚಾನೆಲ್ ಮೂಲಕ ಸಂಪರ್ಕದಲ್ಲಿರಲು ಈ ಉಪಕ್ರಮವನ್ನು ಪ್ರಾರಂಭಿಸಲಾಗಿದೆ.
ಒಂದೇ ಕ್ಲಿಕ್‌ ಮೂಲಕ ತಮ್ಮ ಬೆರಳ ತುದಿಯಲ್ಲಿ ಅಧಿಕೃತ ಮತ್ತು ನವೀಕೃತ ಮಾಹಿತಿಯನ್ನು ಸಲೀಸಾಗಿ ಪ್ರವೇಶಿಸಬಹುದಾಗಿದೆ.
ವಿದ್ಯಾರ್ಥಿಗಳಿಗೆ ನೇರವಾಗಿ ಮಾಹಿತಿಗಳು, ಮಾರ್ಗಸೂಚಿಗಳು ತಲುಪಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಮುಂದಾಗಿದ್ದು, ವಾಟ್ಸಪ್ ಚಾನೆಲ್ ಅನ್ನು ಆರಂಭಿಸಿದೆ. ಇದರಲ್ಲಿ ಯುಜಿಸಿಯು ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ವಿಚಾರಗಳು, ಶಾಲಾ ಕಾಲೇಜುಗಳ ವಿಚಾರಗಳು, ಕೋರ್ಸ್‌ಗಳ ಸಹಿತ ಪ್ರಮುಖ ವಿಚಾರಗಳನ್ನು ತಿಳಿಸಲಾಗುತ್ತದೆ.
ಈ ಕುರಿತು ಮಾಹಿತಿ ನೀಡಿರುವ ಯುಜಿಸಿ ಮುಖ್ಯಸ್ಥ ಎಂ. ಜಗದೀಶಕುಮಾರ ಅವರು, ತಂತ್ರಜ್ಞಾನ ಬಳಸಿಕೊಂಡು ವಿದ್ಯಾರ್ಥಿಗಳನ್ನು, ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳನ್ನು ಶೀಘ್ರವೇ ತಲುಪಲು ಯತ್ನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement