ಬೆಂಗಳೂರು : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ ಬಿಜೆಪಿಗೆ ಗುಡ್ ಬೈ ಹೇಳಿದ್ದು, ಶುಕ್ರವಾರ (ಅಕ್ಟೋಬರ್ ೨೦) ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ ಹಾಗೂ ಟಿ.ಡಿ.ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಪೂರ್ಣಿಮಾ ಶ್ರೀನಿವಾಸ, ಶ್ರೀನಿವಾಸ ಹಾಗೂ ನರಸಿಂಹ ನಾಯಕ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರ ಜೊತೆಗೆ ಸಾವಿರಾರು ಕಾರ್ಯಕರ್ತರು ಸಹ ಸೇರುತ್ತಿದ್ದಾರೆ. ಅವರನ್ನು ಹಾರ್ದಿಕವಾಗಿ ನಮ್ಮ ಪಕ್ಷಕ್ಕೆ ಬರಮಾಡಿಕೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ವೇಳೆ ಸಚಿವ ಡಿ.ಸುಧಾಕರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕ ಜಯಚಂದ್ರ ಉಪಸ್ಥಿತರಿದ್ದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ