ಕರ್ನಾಟಕದ ಕೆಲ ಪ್ರದೇಶ, ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ನವದೆಹಲಿ : ಭಾರತದ ಹವಾಮಾನ ಇಲಾಖೆ (IMD) ಪ್ರಕಾರ ದಕ್ಷಿಣದ ರಾಜ್ಯಗಳಾದ ಕೇರಳ (Kerala) ಮತ್ತು ತಮಿಳುನಾಡು ಹಾಗೂ ಕರಾವಳಿ ಕರ್ನಾಟಕದಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಿಯೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹೇಳಿದೆ.
ಉಪ-ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಕೊಂಕಣ, ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಿಂಚು,ಮಳೆಯಾಗುವ ಸಾಧ್ಯತೆಯಿದೆ.

ಪ್ರಸ್ತುತ ಆಗ್ನೇಯ ಮತ್ತು ನೆರೆಯ ಪೂರ್ವ ಮಧ್ಯ ಅರೇಬಿಯನ್ ಸಮುದ್ರದ ಮೇಲಿರುವ ಕಡಿಮೆ ಒತ್ತಡದ ಪ್ರದೇಶವು ಪೂರ್ವ ಮಧ್ಯ ಮತ್ತು ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಉತ್ತಮವಾಗಿ ಗುರುತಿಸಲ್ಪಟ್ಟ ಕಡಿಮೆ-ಒತ್ತಡದ ಪ್ರದೇಶವಾಗಿ ಬಲಗೊಳ್ಳಲಿದೆ. ಇದು ಬಹುಶಃ ಅಕ್ಟೋಬರ್ 21 ರ ವೇಳೆಗೆ ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಒತ್ತಡವಾಗಿ ತೀವ್ರಗೊಳ್ಳುತ್ತದೆ. ಅಕ್ಟೋಬರ್ 20 ರ ಸುಮಾರಿಗೆ, ಬಂಗಾಳಕೊಲ್ಲಿಯ ಕೇಂದ್ರ ಪ್ರದೇಶಗಳಲ್ಲಿ ಮತ್ತೊಂದು ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಮುನ್ಸೂಚನೆ ಇದೆ. ದೇಶದ ಉಳಿದ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಾಣುವುದಿಲ್ಲ.
ಬಂಗಾಳಕೊಲ್ಲಿಯಲ್ಲಿ ನಿರ್ಮಾಣವಾಗಿರುವ ಕಡಿಮೆ ಒತ್ತಡದ ವಾತಾವರಣದ ಪರಿಣಾಮವಾಗಿ ಒಡಿಶಾದಲ್ಲಿ ಅಕ್ಟೋಬರ್ 23 ಮತ್ತು 24 ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಮಳೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡುಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು,ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರೆ ಹೆಚ್ಚಾಗುವ ಸಾಧ್ಯತೆ ಇದೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement