ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಪ್ರಕರಣ ; ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.
ತುಮಕೂರಿನಲ್ಲಿ ಈ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಭಾಗಿಯಾಗಿದ್ದಾರೆ. ಯಾರೆ ಕೈವಾಡವಿದೆ ಎಂಬುದು ತನಿಖೆ ನಂತರ ಗೊತ್ತಾಗಲಿದೆ ಎಂದು ಹೇಳಿದ್ದಾರೆ.
ಸಚಿವ ಶರಣಪ್ರಕಾಶ ಪಾಟೀಲ ಅವರ ವಿರುದ್ಧ ಕೆಲವರು ಆರೋಪ ಮಾಡುತ್ತಿದ್ದಾರೆ. ಅದರ ಬಗ್ಗೆ ಪರಿಶೀಲನೆ ನಡೆಸಿ ಆ ನಂತರವೇ ಅದು ಸತ್ಯವೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.
ಸಿಐಡಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಿದೆ. ತನಿಖಾ ವರದಿ ಬಂದ ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ​ ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement