ಮೈಸೂರಿನಲ್ಲಿಯೂ ಮೆಟ್ರೋ ರೈಲುಗಳು ಓಡಾಡಲಿವೆ : ಪಿಎಂ ಮೋದಿ

ನವದೆಹಲಿ : ಬೆಂಗಳೂರಿನಲ್ಲಿ ಮೆಟ್ರೋ ರೈಲುಗಳ ಸಂಚಾರ ನಡೆಸುತ್ತಿವೆ. ಅದರಂತೆ ಮೈಸೂರಿನಲ್ಲಿಯೂ ಮೆಟ್ರೋ ರೈಲುಗಳು ಸಂಚರಿಸುವ ದಿನಗಳೂ ದೂರವಿಲ್ಲ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೈಸೂರು ಜನರಿಗೆ ಸಂತಸದ ಸುದ್ದಿ ತಿಳಿಸಿದ್ದಾರೆ.
ಶುಕ್ರವಾರ ದೆಹಲಿಯಿಂದ ವರ್ಚುವಲ್ ಮೂಲಕ ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿ-ಚಲ್ಲಘಟ್ಟ ಮತ್ತು ಬೈಯ್ಯಪ್ಪನಹಳ್ಳಿ-ಕೆ.ಆರ್‌ಪುರಂ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಬೆಂಗಳೂರಿನಿಂದ ಮೈಸೂರುವರೆಗೆ ಮೆಟ್ರೋ ರೈಲು ಜಾಲ ವಿಸ್ತರಣೆ ಮಾಡುವ ಬಗ್ಗೆ ಪ್ರಸ್ತಾಪಿಸಿದರು. ಬೆಂಗಳೂರಿನಲ್ಲಿ ಮೆಟ್ರೋ ರೈಲು ಸೇವೆ ಇದೆ. ಮುಂದಿನ ದಿನಗಳಲ್ಲಿ ಮೈಸೂರಿನ ಜನತೆಯು ಮೆಟ್ರೊದಲ್ಲಿ ಓಡಾಡುವ ಕಾಲ ದೂರವಿಲ್ಲ. ಬೆಂಗಳೂರಿನಿಂದ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ನೆರವು ನೀಡಲಾಗುತ್ತದೆ. ಈ ಮೂಲಕ ಬೆಂಗಳೂರು ಮತ್ತು ಮೈಸೂರು ಎರಡು ನಗರಗಳ ಮಧ್ಯೆ ಮೆಟ್ರೋ ಸಂಚಾರದ ಬಗ್ಗೆ ಸುಳಿವು ನೀಡಿದ್ದಾರೆ.
‘ನಮ್ಮ ಮೆಟ್ರೋ’ ಜಾಲ 74 ಕಿ.ಮೀ.
ಬೆಂಗಳೂರಿನ ಜನರಿಗೆ ಸುರಕ್ಷಿತ ಮತ್ತು ವೇಗದ ಸಾರಿಗೆ ಒದಗಿಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)ವು ಸದ್ಯ ಪೂರ್ವ-ಪಶ್ಚಿಮ ಮತ್ತು ಉತ್ತರದಿಂದ ದಕ್ಷಿಣ ಕಡೆಗೆ ಹಾಲಿ 74 ಕಿಲೋ ಮೀಟರ್ ಕಾರ್ಯ ನಿರ್ವಹಿಸುತ್ತಿದೆ.

ಪ್ರಮುಖ ಸುದ್ದಿ :-   ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement