ವಿಎಚ್‌ಪಿ ಮುಖಂಡನ ಮೇಲೆ ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು ಎಂದು ಪ್ರಕಟಣೆ ಹೊರಡಿಸಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ನ ರಜಾಕಾಲೀನ ಪೀಠವು ಮಧ್ಯಂತರ ತಡೆ ನೀಡಿದೆ.
ತಮ್ಮ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಶರಣ್‌ ಪಂಪ್‌ವೆಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕರಣ ಆಲಿಸಿ, ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಎಂ ಅರುಣ ಶ್ಯಾಂ ಅವರು, ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಪ್ರಕಟಣೆ ಹೊರಡಿಸಲಾಗಿದೆ ಎಂಬ ದೂರಿನಲ್ಲಿ ಹುರುಳಿಲ್ಲ. ಇದರಲ್ಲಿ ಪೊಲೀಸರು ಸ್ವಯಂಪ್ರೇರಿತವಾಗಿ ದಾಖಲು ಮಾಡಿಕೊಂಡಿದ್ದು, ಈ ಪ್ರಕರಣ ರಾಜಕೀಯ ಪ್ರೇರಿತವಾಗಿದೆ ಮತ್ತು ದುರುದ್ದೇಶದಿಂದ ಕೂಡಿದೆ. ಆದ್ದರಿಂದ, ಎಫ್‌ಐಆರ್‌ ರದ್ದುಗೊಳಿಸಬೇಕು ಎಂದು ಕೋರಿದರು.

ಪ್ರಮುಖ ಸುದ್ದಿ :-   ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement