ಸಾರಿಗೆ ನಿಗಮಗಳಿಗೆ 5675 ಬಸ್‌ ಖರೀದಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಶಕ್ತಿ ಯೋಜನೆಗೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ ಗಳ ಖರೀದಿಗೆ 500 ಕೋಟಿ ರೂ. ತೆಗೆದಿರಿಸಲಾಗಿದ್ದು, ಖರೀದಿ ಪ್ರಕ್ರಿಯೆಯನ್ನು ಶೀಘ್ರವೇ ಪೂರ್ಣಗೊಳಿಸಲು ಅವರು ಸೂಚಿಸಿದರು.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಪ್ರಯಾಣಿಕರ ಸಂಖ್ಯೆ ಶೇ. 15 ರಷ್ಟು ಹೆಚ್ಚಾಗಿದೆ. ಹೀಗಾಗಿ ಹೆಚ್ಚುವರಿ ಶೆಡ್ಯೂಲ್ ಗಳನ್ನು ಸೇರಿಸಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಅನುವಾಗುವಂತೆ ಬಸ್‌ ಗಳನ್ನು ಖರೀದಿಸುವಂತೆ ಸೂಚಿಸಿದರು.
ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ. ಪ್ರಸಾದ, ಎಲ್ಲ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು

ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement