ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಎಫ್​ಐಆರ್​ ದಾಖಲು

ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರೊ. ಕೆ.ಎಸ್​. ಭಗವಾನ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.
ಗಂಗಾಧರ ಅವರು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಮೈಸೂರಿನ ಗಂಗಾಧರ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ.
ಪ್ರೊ. ಭಗವಾನ್ ಶ್ರೀರಾಮ ಹಾಗೂ ಒಕ್ಕಲಿಗ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಅಕ್ಟೋಬರ್‌ 13ರಂದು ಮೈಸೂರಿನ ಟೌನ್‌ಹಾಲ್ ಬಳಿ ಮಹಿಷ ದಸರಾ ಕಾರ್ಯಕ್ರಮದ ವೇಳೆ ಮಾತನಾಡಿದ ಕೆ.ಎಸ್.ಭಗವಾನ್, ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಹೇಳಿದ್ದರು.
ಇದರ ನಂತರ ಒಕ್ಕಲಿಗರು ಕೆ.ಎಸ್.ಭಗವಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸರಣಿ ಪ್ರತಿಭಟನೆಗಳನ್ನು ನಡೆಸಿದ್ದರು. ರಾಜ್ಯದ ಅನೇಕ ಪೊಲೀಸ್​ ಠಾಣೆಗಳಲ್ಲಿ ಭಗವಾನ್​ ವಿರುದ್ಧ ಒಕ್ಕಲಿಗ ಸಂಘಟನೆಗಳು ದೂರು ಸಹ ದಾಖಲಿಸಿದ್ದವು. ಈಗ ಮೈಸೂರಿನ ದೇವರಾಜ ಪೊಲೀಸ್​ ಠಾಣೆಯಲ್ಲಿ ಭಗವಾನ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement