ದಸರಾ ಗಿಫ್ಟ್ : ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಉಡುಗೊರೆ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈಗ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ. ಯುಜಿಸಿ/ AICTE/ ICAR ವೇತನ ಶ್ರೇಣಿಗಳ ಬೋಧಕ ಸಿಬ್ಬಂದಿ ಹಾಗೂ NJPC ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳ ತುಟ್ಟಿಭತ್ಯೆಯನ್ನು ಶೇ. 4 ರಷ್ಟು ಹೆಚ್ಚಿಸಿ (ಶೇ 46 ಕ್ಕೆ ಪರಿಷ್ಕರಿಸಿ) ಸರ್ಕಾರ ಆದೇಶ ಹೊರಡಿಸಿದೆ.
ಬುಧವಾರವಷ್ಟೇ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಶೇಕಡ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿತ್ತು. ಇಂದು ಶನಿವಾರ ರಾಜ್ಯ ಸರ್ಕಾರ ತನ್ನ ನೌಕರರಿಗೆ ಶೇಕಡ 3.75ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದೆ.

ಕೇಂದ್ರ ಸರ್ಕಾರ ಹೆಚ್ಚಳ ಮಾಡಿದ ನಂತರ ರಾಜ್ಯ ಸರ್ಕಾರ ಕೂಡ ತುಟ್ಟಿಭತ್ಯೆ ಹೆಚ್ಚಳ ಮಾಡುವುದು ವಾಡಿಕೆಯಾಗಿದೆ.ತುಟ್ಟಿಭತ್ಯೆಯು ( ಡಿಎ ) ನೌಕರರ ಸಂಬಳದ ಭಾಗವಾಗಿದೆ. ನೌಕರರ ಮೂಲ ಸಂಬಳಕ್ಕೆ ಶೇಕಡಾವಾರು ಲೆಕ್ಕಚಾರದಿಂದ ಡಿಎಯನ್ನು ಅಳೆಯಲಾಗುತ್ತದೆ. ಡಿಎ ಮೊತ್ತವನ್ನು ಮೂಲ ಸಂಬಳಕ್ಕೆ ಸೇರಿಸಲಾಗುತ್ತದೆ. ಆ ನಂತರ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ಪ್ರತಿ ವರ್ಷದ ಬೆಲೆ ಏರಿಕೆಯನ್ನು ಗಮನದಲ್ಲಿ ಇಟ್ಟುಕೊಂಡು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡುವುದು ರೂಢಿಯಲ್ಲಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement