ಸಾರಿಗೆ ಸಂಸ್ಥೆಗಳಿಗೆ 8719 ಸಿಬ್ಬಂದಿ ನೇಮಕಾತಿಗೆ ಸರ್ಕಾರದ ಅನುಮತಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಸಾರಿಗೆ ಸಂಸ್ಥೆಗಳಲ್ಲಿ ಕಳೆದ 8 ವರ್ಷಗಳಿಂದ ಯಾವುದೇ ಹುದ್ದೆಗಳಿಗೆ ನೇಮಕಾತಿ ಆಗಿರಲಿಲ್ಲ. 2016 ರಿಂದ ಈವರೆಗೆ ಸಿಬ್ಬಂದಿಯ ನಿವೃತ್ತಿ ಹಾಗೂ ಇತರೆ ಕಾರಣದಿಂದ 13,669 ಹುದ್ದೆಗಳು ಖಾಲಿ ಆಗಿವೆ. ಹೀಗಾಗಿ 13 ಸಾವಿರ ಚಾಲನಾ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ನಿಗಮಗಳಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಮೊದಲ ಹಂತದಲ್ಲಿ 6500 ಚಾಲನಾ ಸಿಬ್ಬಂದಿ ಹಾಗೂ 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಇವುಗಳ ಕೆಕೆಆರ್‌ಟಿಸಿಯಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಆರಂಭವಾಗಿ ಚಾಲನಾ ಪರೀಕ್ಷೆಯೂ ನಡೆಯುತ್ತಿದೆ. 2024 ರ ಜನವರಿ ಅಂತ್ಯದ ವೇಳೆಗೆ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ. ಇದಲ್ಲದೆ, 300 ಕಂಡಕ್ಟರ್‌ಗಳ ಹುದ್ದೆಗಳ ನೇಮಕಾತಿಗೆ ಅನುಮತಿ ಸಿಕ್ಕಿದ್ದು, ಅಧಿಸೂಚನೆ ಹಂತದಲ್ಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( KSRTC) ಡ್ರೈವರ್ ಕಮ್ ಕಂಡಕ್ಟರ್ – 2000
ಕೆಎಸ್‌ಆರ್‌ಟಿಸಿ ತಾಂತ್ರಿಕ ಸಿಬ್ಬಂದಿ – 300
ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ (NWKRTC) ಡ್ರೈವರ್ ಕಮ್ ಕಂಡಕ್ಟರ್ – 2000
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) : ಕಂಡಕ್ಟರ್ 2500
ಕೆಕೆಆರ್‌ಟಿಸಿ : 1,919
ಒಟ್ಟು 8,419 300

ಪ್ರಮುಖ ಸುದ್ದಿ :-   ಸಿದ್ದಾಪುರ : ಮಂಗನ ಕಾಯಿಲೆಗೆ ಐದು ವರ್ಷದ ಬಾಲಕಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement