ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಇರಲಿಲ್ಲ ಹಾಗೂ ಒಣ ಹವೆ ಇತ್ತು. ಆದರೆ, ಭಾನುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶನಿವಾರ ರಾತ್ರಿ ಮಳೆ ಸುರಿದಿದೆ. ಕಳೆದ ಎರಡು ದಿನಗಳಿಂದ ಮಳೆ ಬಿಡುವು ಪಡೆದಿತ್ತು. ಎಲ್ಲೆಡೆ ಸೆಖೆ ವಾತಾವರಣ ಕಂಡು ಬಂದಿತ್ತು. ಶನಿವಾರ ರಾತ್ರಿ ಮತ್ತೆ ಮಳೆ ಸುರಿದಿದೆ. ಇದೇ ವೇಳೆ ರಾಜ್ಯದ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ ಹಾಗೂ ಬಿಸಿಲಿನ ಧಗೆ ಇರಲಿದೆ ಎಂದು ಅದು ತಿಳಿಸಿದೆ.

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement