ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶಕುಮಾರ ಆಪ್ತ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಶ್ರೀನಿವಾಸಪುರ ತಾಲೂಕು ಹೊಗಳಗೆರೆ ಬಳಿ ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸ ಅವರ ಮೇಲೆ ಆರು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಐಗೊಂಡಿದ್ದ ಅವರನ್ನು ತಕ್ಷಣವೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಒಯ್ಯಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಎಂ.ಶ್ರೀನಿವಾಸ ಅವರು ಹೊಗಳಗೆರೆ ಬಳಿ ಬಾರ್ ನಡೆಸುತ್ತಿದ್ದು, ಕಟ್ಟಡ ಕಾಮಗಾರಿ ವೀಕ್ಷಣೆಗೆಂದು ಹೋಗಿದ್ದ ವೇಳೆ ಆರು ಜನರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿತ್ತು. ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸಿದ್ದಾರೆ.
ಮಾಜಿ ಸ್ಪೀಕರ ರಮೇಶಕುಮಾರ ಆಸ್ಪತ್ರೆಗೆ ಭೇಟಿ ನೀಡಿದ್ದು ಕಣ್ಣೀರು ಹಾಕಿದ್ದಾರೆ. ಶ್ರೀನಿವಾಸ ಸಾವಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದು, ಹತ್ಯೆ ಮಾಡಿದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement