ಮಹಿಳೆಯ ಹಸ್ತಕ್ಷೇಪದಿಂದ ಸರ್ಕಾರಕ್ಕೆ ಇಕ್ಕಟ್ಟು : ದೇವರಗುಡ್ಡದ ಐತಿಹಾಸಿಕ ಕಾರ್ಣಿಕ ಭವಿಷ್ಯ

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶ ದೇವರ ಕಾರ್ಣಿಕ ನುಡಿಯಲಾಗಿದೆ. ವರ್ಷದ ಭವಿಷ್ಯವಾಣಿ ಎಂದೇ ಪ್ರಸಿದ್ಧಿ ಪಡೆದಿರುವ ಮಾಲತೇಶ ದೇವರ ಕಾರ್ಣಿಕದಲ್ಲಿ ಕಾರಣಿಕ ನುಡಿಯುವ ಗೊರವಯ್ಯ ಸ್ವಾಮಿ ಈ ಬಾರಿ`ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್’ ಎಂದು ದೈವವಾಣಿ ನುಡಿದಿದ್ದಾರೆ.
ಬಿಲ್ಲನ್ನೇರಿದ ಗೊರವಪ್ಪ ನಾಗಪ್ಪ ಉರ್ಮಿ ಅವರು ಸೋಮವಾರ ಈ ಬಾರಿಯ ಕಾರ್ಣಿಕ ನುಡಿದಿದ್ದಾರೆ. ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ ಭಟ್ ಕಾರ್ಣಿಕ ನುಡಿಯನ್ನು ವಿಶ್ಲೇಷಣೆ ಮಾಡಿದ್ದು, ಮುಕ್ಕೋಟಿ ಚೆಲ್ಲಿತಲೇ ಅಂದರೆ ರೈತರು ಕೋಟ್ಯಂತರ ರೂ. ಭೂಮಿಗೆ ಹಾಕುತ್ತಾರೆ. ಮುಕ್ಕೋಟಿ ರೈತರು ನೀರಿಗಾಗಿ ಹಣ ಚೆಲ್ಲಿದ್ದಾರೆ. ಮಳೆ ಬೆಳೆಯಲ್ಲಿದೆ ನಷ್ಟವಾಗುವ ಸಾಧ್ಯತೆ ಇದೆ. ರಾಜ್ಯಕ್ಕೆ ವರುಣನ ಅವಕೃಪೆಯಿಂದಾಗಿ ಭೀಕರ ಬರಗಾಲ ಎದುರಾಗಬಹುದು ಎಂದು ವಿಶ್ಲೇಷಣೆ ಮಾಡಿದ್ದಾರೆ.

ಇನ್ನೂ ಮುಕ್ಕೊಟ್ಟಿ ಚೆಲ್ಲಿತಲೇ ಕಲ್ಯಾಣ ಕಟ್ಟಿತಲೇ ಪರಾಕ್ ಎಂಬುದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಿದ ಅವರು, ಮುಕ್ಕೋಟಿ ಮತದಾರರ ಮತದ ಆಶೀರ್ವಾದದಿಂದ ರಾಜ್ಯದಲ್ಲಿ ಒಮ್ಮತದ ಸರ್ಕಾರ ರಚನೆಯಾಗಿದೆ. ಆದರೆ ಹೆಣ್ಣಿನ ಹಸ್ತಕ್ಷೇಪದಿಂದ ಸರ್ಕಾರದಲ್ಲಿ ಏರುಪೇರಾಗುವ ಸಂಭವವಿದೆ ಎಂದು ಹೇಳಿದ್ದಾರೆ.
ರಾಣೇಬೆನ್ನೂರಿನ ದೇವರಗುಡ್ಡದ ( ಮಾಲತೇಶ ದೇವಸ್ಥಾನ ಹಲವು ವರ್ಷಗಳ ಇತಿಹಾಸ ಹೊಂದಿದೆ. ದಸರಾ ಹಬ್ಬದ ಸಮಯದಲ್ಲಿ ದೇವರಗುಡ್ಡದ ಕರಿಯಾಲ ಪ್ರದೇಶದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕ ಕೇಳಲು ಸಾವಿರಾರು ಜನ ಸೇರುತ್ತಾರೆ. ಸುಮಾರು 9 ದಿನಗಳ ಕಾಲ ಕಠಿಣ ಉಪವಾಸ ವ್ರತ ಮಾಡಿ ಗೊರವಪ್ಪ ಕಾರ್ಣಿಕ ನುಡಿಯುತ್ತಾರೆ.

ಪ್ರಮುಖ ಸುದ್ದಿ :-   ಲೈಂಗಿಕ ದೌರ್ಜನ್ಯ ಪ್ರಕರಣ: ಮಹಿಳೆ ಅಪಹರಣ ಪ್ರಕರಣದಲ್ಲಿ ಎಚ್.ಡಿ. ರೇವಣ್ಣ ಬಂಧನ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement