ಹುಲಿ ಉಗುರು ಪ್ರಕರಣ; ನಟ ಜಗ್ಗೇಶ ವಿರುದ್ಧ ದೂರು ದಾಖಲು

ಬೆಂಗಳೂರು : ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ ಬಂಧನದ ಬೆನ್ನಲ್ಲೇ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರಿಗೂ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ ಅವರು ಹುಲಿ ಉಗುರು ಇರುವ ಲಾಕೆಟ್​​​​ ಧರಿಸಿರುವ ವಿಡಿಯೋ ವೈರಲ್​ ಆದ ಬೆಬನ್ನಲ್ಲೇ ಅವರ ವಿರುದ್ಧ ಕಾಂಗ್ರೆಸ್​ನ ಮಾಜಿ ವಿಧಾನ ಪರಿಷತ್‌ ಸದಸ್ಯ ಪಿ.ಆರ್ ರಮೇಶ, ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ತಮ್ಮ ಬಳಿ ಹುಲಿ ಉಗುರು ಇರುವ ಬಗ್ಗೆ ಜಗ್ಗೇಶ್ ಬಹಿರಂಗವಾಗಿಯೇ ಹೇಳಿಕೆ‌ ನೀಡಿದ್ದರು. ಆ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಹುಲಿ ಉಗುರಿನ ಪೆಂಡೆಂಡ್‌ ಧರಿಸಿದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ ಬಂಧನವಾಗಿದ್ದು, ನಂತರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ, ಯಾವುದೇ ವನ್ಯಜೀವಿಗೆ ಸಂಬಂಧಿಸಿದ ಚರ್ಮ, ಮೂಳೆ, ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3ರಿಂದ 7ವರ್ಷ ಜೈಲು ಮತ್ತು ಕನಿಷ್ಠ 10,000 ರೂ. ದಂಡ ವಿಧಿಸಬಹುದು.

ಪ್ರಮುಖ ಸುದ್ದಿ :-   ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement