ಹುಲಿ ಉಗುರು ಪ್ರಕರಣ : ನಟ ದರ್ಶನ್, ಜಗ್ಗೇಶ, ರಾಕ್ ಲೈನ್ ವೆಂಕಟೇಶ ನಿವಾಸದಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಬೆಂಗಳೂರು : ಹುಲಿ ಉಗುರು ಪೆಂಡೆಂಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ಸಂಸದ ಜಗ್ಗೇಶ, ಚಾಲೇಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ ನಿವಾಸಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ದೂರಿನ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ನಟ ದರ್ಶನ್​, ರಾಜ್ಯಸಭಾ ಸದಸ್ಯ ಜಗ್ಗೇಶ, ರಾಕ್​ಲೈನ್ ವೆಂಕಟೇಶ್ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಆರ್​ ಆರ್​ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ. ಬೆಂಗಳೂರು ನಗರ ಆರ್​ ಎಫ್ ಸೇರಿದಂತೆ ಇಬ್ಬರು ಅಧಿಕಾರಿಗಳು ಆಗಮಿಸಿದ್ದಾರೆ. ದರ್ಶನ್ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಬಗ್ಗೆಬಗ್ಗೆ ದೂರು ಬಂದ ಹಿನ್ನೆಲೆ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಜಗ್ಗೇಶ​ ಮನೆಗೆ ನೋಟಿಸ್​ ನೀಡಲು ಅರಣ್ಯಾಧಿಕಾರಿಗಳು ಆಗಮಿಸಿದ್ರು. ನಟ ಜಗ್ಗೇಶ್​ ಮನೆಯಲ್ಲಿ ಇಲ್ಲದ ಕಾರಣ ಪತ್ನಿ ಪರಿಮಳ ಜಗ್ಗೇಶ ಬಳಿ ಹುಲಿ ಉಗುರಿನ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ಜಗ್ಗೇಶ ಅವರು ತಮ್ಮ ಊರು ತುರುವೇಕೆರೆಗೆ ಹೋಗಿದ್ದಾರೆ ಎನ್ನಲಾಗಿದೆ.
ಮಹಾಲಕ್ಷ್ಮಿ ಲೇಔಟ್​ನಲ್ಲಿ ನಟ ರಾಕ್​ಲೈನ್​ ವೆಂಕಟೇಶ ನಿವಾಸಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಅಧಿಕಾರಿಗಳು ಮನೆಯೊಳಗೆ ಹೋಗಿ ಪರಿಶೀಲನೆ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement