ಚಿಕ್ಕಬಳ್ಳಾಪುರ : ನಿಂತಿದ್ದ ಟ್ಯಾಂಕರ್‌ಗೆ ಟಾಟಾ ಸುಮೋ ಡಿಕ್ಕಿ ; ಮಗು ಸೇರಿ 13 ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ ಎಂದು ವರದಿಯಾಗಿದೆ.
ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ.
ಮೃತಪಟ್ಟವರು ಆಂದ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ಗ್ರಾಮದ ವ್ಯಾಪ್ತಿಗೆ ಸೇರಿದವರು ಎಂದು ಗೊತ್ತಾಗಿದೆ.
ಮೃತರು ಆಂಧ್ರದ ಗೊರೆಂಟ್ಲ ಮೂಲದವರಾಗಿದ್ದು ಬೆಂಗಳೂರಿನಲ್ಲಿ ವಾಸವಾಗಿದ್ದರು. ದಸರಾ ಹಬ್ಬಕ್ಕೆ ಸ್ವಗ್ರಾಮಕ್ಕೆ ತೆರಳಿದ್ದ ಇವರು ಹಬ್ಬ ಮುಗಿದ ನಂತರ ಬೆಂಗಳೂರಿಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಪಂಚರ್ ಆಗಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ದಟ್ಟ ಮಂಜು ಆವರಿಸಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಊಹಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳು ತಿಳಿದಿಬರಬೇಕಿದೆ.

ಪ್ರಮುಖ ಸುದ್ದಿ :-   ವೀಡಿಯೊ : ಯಡವಟ್ಟಿನಿಂದ ಚಾಲಕನೇ ಇಲ್ಲದೆ ಗಂಟೆಗೆ 100 ಕಿಮೀ ವೇಗದಲ್ಲಿ 70 ಕಿಮೀ ದೂರ ಓಡಿದ ರೈಲು..: ಆಗಿದ್ದೇನೆಂದರೆ..| ವೀಕ್ಷಿಸಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement