ಹುಲಿ ಉಗುರು ಪ್ರಕರಣ: ವಿಚಾರಣೆಗೆ ಹಾಜರಾಗದ ಅರಣ್ಯಾಧಿಕಾರಿ ಬಂಧನ

ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್​ ಧರಿಸಿದ ಆರೋಪದ ಮೇಲೆ ಬಿಗ್​ಬಾಸ್​ ಸ್ಪರ್ಧಿ ವರ್ತೂರು ಸಂತೋಷ​ ಬಂಧನ ಬೆನ್ನಲ್ಲೇ ರಾಜ್ಯದಲ್ಲಿ ಹುಲಿ ಉಗುರು ಪೆಂಟೆಂಟ್‌ ಪ್ರಕರಣಗಳು ಈಗ ಹೊರಬರುತ್ತಿವೆ.
ಕಳಸದ ಡಿ.ಆರ್.ಎಫ್.ಒ. ದರ್ಶನ್ ಎಂಬವರನ್ನು ಎನ್​.ಆರ್​. ಪುರದಲ್ಲಿ ಅರಣ್ಯಾಧಿಕಾರಿಗಳು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ. ಹುಲಿ ಉಗುರು ಧರಿಸಿದ ಆರೋಪ ಕೇಳಿಬಂದ ಬೆನ್ನಲ್ಲೇ ದರ್ಶನ್​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗದೇ ಇದ್ದುದಕ್ಕೆ ದರ್ಶನ್​ರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ ದರ್ಶನ್​ ಅವರನ್ನು ಕೊಪ್ಪ ಡಿ.ಎಫ್.ಓ. ಅಮಾನತು ಮಾಡಿ ಆದೇಶ ಹೊರಡಿಸಿದ್ದರು ಎಂದು ವರದಿಯಾಗಿತ್ತು. ಅಮಾನತು ಮಾಡಿದ ಮೇಲೂ ವಿಚಾರಣೆಗೆ ಹಾಜರಾಗದ ದರ್ಶನ್‌ಅನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಅರಣ್ಯಾಧಿಕಾರಿ ದರ್ಶನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರೆನೂರು ಗ್ರಾಮದವರಾದ ಸುಪ್ರೀತ್ ಹಾಗೂ ಅಬ್ದುಲ್ ಎಂಬುವವರು ಆಲ್ದೂರು ವಲಯ ಅರಣ್ಯಾಧಿಕಾರಿಗೆ ಲಿಖಿತ ದೂರು ನೀಡಿದ್ದರು. ನಂತರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದರೂ ವಿಚಾರಣೆಗೆ ಬಂದಿರಲಿಲ್ಲ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement