ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

ಚಿಕ್ಕಮಗಳೂರು : ಮೂರು ದಿನಗಳಕಾಲ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ನವೆಂಬರ್ 4 ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರ ವರೆಗೆ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಹೊನ್ನಮ್ಮನಹಳ್ಳ, ಮಾಣಿಕ್ಯಧಾರಾ, ಗಾಳಿಕೆರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಸಲಾಗಿದೆ. ಅಕ್ಟೋಬರ್ 30 ರಿಂದ ನವೆಂಬರ್ 5ರವರೆಗೆ ಮುಳ್ಳಯ್ಯನಗಿರಿ ಭಾಗದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ನವೆಂಬರ್ 4 ಬೆಳಗ್ಗೆಯಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಮುಳ್ಳಯ್ಯನಗಿರಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ದತ್ತಪೀಠಕ್ಕೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ಟೋಬರ್ 30 ರಿಂದ ನವೆಂಬರ್ 5 ರವರೆಗೆ ಆಚರಿಸಲಾಗುವ ದತ್ತ ಮಾಲಾ ಅಭಿಯಾನವನ್ನು ಶಾಂತಿಯುತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement