ವಿದ್ಯಾರ್ಥಿನಿ ಮೇಲೆ ಎಸಿಡ್: ಮುಖ್ಯ ಶಿಕ್ಷಕ ಅಮಾನತು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿಗೆ ಆ್ಯಸಿಡ್‌ ಎರಚಿದ ಆರೋಪದ ಮೇಲೆ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.
ಮುಖ್ಯ ಶಿಕ್ಷಕ ಜಿ.ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಸಿಂಚನಾ ಎಂಬವಳ ಮೇಲೆ ಎರಚಿದ ಆರೋಪ ಕೇಳಿ ಬಂದಿತ್ತು. ಈ ಪರಿಣಾಮ ಸಿಂಚನಾಳ ಬೆನ್ನಿಗೆ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗಾಯಾಳು ಬಾಲಕಿಯ ತಾಯಿ ಪವಿತ್ರಾ ಆಗ್ರಹಿಸಿದ್ದರು. ಗಾಯಾಳು ಸಿಂಚನಾಳನ್ನು ಮುಖ್ಯ ಶಿಕ್ಷಕ ರಂಗಸ್ವಾಮಿಯೇ ಜಿಲ್ಲಾಸ್ಪತ್ರೆಗೆ ಕರೆ ತಂದು ಚಿಕಿತ್ಸೆ ಕೊಡಿಸಿದ್ದರು.ಈ ಸಂಬಂಧ ಮುಖ್ಯ ಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿ ಆಧರಿಸಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ರಂಗಸ್ವಾಮಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳಿಗೆ ಸೂಚಿಸಿದ್ದರು. ಆದರೆ ಟಾಯ್ಲೆಟ್ ಒಂದು ಸರಿಯಾಗಿ ಸ್ವಚ್ಛಗೊವಾಗದಿರುವುದನ್ನು ಕಂಡು ರಂಗಸ್ವಾಮಿ ಅವರು ತಾವೇ ಸ್ವಚ್ಛ ಮಾಡಲು ಮುಂದಾಗಿದ್ದರು, ಅದಕ್ಕಾಗಿ ಪಾಕೆಟ್ ಕಟ್ ಮಾಡಿ ಆ್ಯಸಿಡ್‌ ಅನ್ನು ನೆಲದ ಮೇಲೆ ಎರಚುವಾಗ ಆ ವೇಳೆ ಅಲ್ಲಿಯೇ ನಿಂತಿದ್ದ ಬಾಲಕಿಗೆ ಆ್ಯಸಿಡ್ ಸಿಡಿದಿದೆ, ಯಾವುದೇ ದುರುದ್ದೇಶ ಇರಲಿಲ್ಲ ಎಂದು ರಂಗಸ್ವಾಮಿ ಹೇಳಿಕೆ ನೀಡಿದ್ದರು.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement