ಹುಲಿ ಉಗುರು ಪ್ರಕರಣ : ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷಗೆ ಜಾಮೀನು

ಬೆಂಗಳೂರು : ಹುಲಿ ಉಗುರನ್ನೊಳಗೊಂಡ ಆಭರಣ ಧರಿಸಿದ್ದ ಪ್ರಕರಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಭಾನುವಾರ ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷಗೆ ಜಾಮೀನು ದೊರಕಿದೆ.
2ನೇ ಎಸಿಜೆಎಂ ಕೋರ್ಟ್ ಜಾಮೀನು ನೀಡಿದ್ದು, 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ.
ಕೋರ್ಟ್‌ ಜಾಮೀನು ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಸಂತೋಷ ಇಂದು, ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಹಳ್ಳಿಕಾರ್‌ ರಾಸುಗಳ ರಕ್ಷಣೆಯ ಮೂಲಕ ಗುರುತಿಸಿಕೊಂಡಿದ್ದ ವರ್ತೂರು ಸಂತೋಷ ಅವರು 10ನೇ ಅವೃತ್ತಿಯ ಬಿಗ್‌ ಬಾಸ್‌ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು.
ಸಂತೋಷ ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಪೆಂಡೆಂಟ್‌ ಹಾಕಿಕೊಂಡಿದ್ದರು. ಈ ಕಾರಣಕ್ಕೆ ದೂರಿನ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯಲ್ಲಿದ್ದಾಗ ಅರಣ್ಯ ಅರಣ್ಯಾಧಿಕಾರಿಗಳು ಸಂತೋಷ ಅವರನ್ನು ಬಂಧಿಸಿದ್ದರು. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್‌ 9ರ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ಟೋಬರ್‌ 22ರ ಭಾನುವಾರ ಅವರನ್ನು ಬಂಧಿಸಲಾಗಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಲ್ಲರ ಹೃದಯಗೆದ್ದ ವಿಶೇಷಚೇತನ ಸಮಾಜ ಸೇವಕ ಬೆಂಗಳೂರಿನ ಡಾ.ರಾಜಣ್ಣ ; ವೀಡಿಯೊ ಭಾರೀ ವೈರಲ್‌

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement