ನಿಗಮ ಮಂಡಳಿಗಳಿಗೆ ಶೀಘ್ರವೇ ನೇಮಕ ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ; ಸಿಎಂ ಸಿದ್ದರಾಮಯ್ಯ

ಮಂಗಳೂರು : ನಿಗಮ – ಮಂಡಳಿಗಳಿಗೆ ಶೀಘ್ರವೇ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಹಾಗೂ ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉಡುಪಿಯಲ್ಲಿ ಆಯೋಜಿಸಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳಲ್ಲಿ ಎರಡನೇ ಹಂತದಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಸಿಎಂ ಅಂದ್ರೆ ಕಲೆಕ್ಷನ್ ಮಾಸ್ಟರ್ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫೇಸ್‌ಬುಕ್ ನಲ್ಲಿ ಬರೆದುಕೊಂಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹರೀಶ ಪೂಂಜಾ ಮೊಮ್ಮಾ ಶಾಸಕರಾಗಿದ್ದಾರೆ. ನಾನು1983ರಿಂದ ಶಾಸಕನಾಗಿ, 1985ರಲ್ಲಿ ಸಚಿವನಾಗಿದ್ದವನು. ಆವತ್ತು ಯಾರೂ ನನ್ನ ಈ ರೀತಿ ಕರೆದಿರಲಿಲ್ಲ. ಇ ಪಾಪ ಇನ್ನೂ ಇವರು ರಾಜಕೀಯದಲ್ಲಿ ಬಚ್ಚಾ ಎಂದು ಹೇಳಿದರು.
ಬಿಜೆಪಿಯವರು ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ನೀಡುತ್ತಿರುವ ಬಗ್ಗೆ ಮಾಹಿತಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ ಎಂಬುದು ತಿಳಿದಿದೆ. ಆದರೆ 50 ಕೋಟಿ, ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಇಲ್ಲ ಎಂದರು.
ಬರ ಪರಿಹಾರ 7900 ಕೋಟಿ ರೂ.ಗಳನ್ನು ಕೇಂದ್ರದ ಬಳಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರವನ್ನೂ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಕಳ ಪರಶುರಾಮ ಮೂರ್ತಿ ವಿವಾದಕ್ಕೆ ಸಂಬಂದಪಟ್ಟಂತೆ ಮೂರ್ತಿ ಅಸಲಿಯೋ ನಕಲಿಯೋ ತನಿಖೆ ಆಗಲಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕಪ್ಪತ್ತಗುಡ್ಡದ ಅಂಚಿನಿಂದ 1 ಕಿಮೀ ವ್ಯಾಪ್ತಿಯಲ್ಲಿ ಕಲ್ಲು, ಮರಳು ಗಣಿಗಾರಿಕೆಗೆ ನಿಷೇಧ : ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement