ಆಂಧ್ರದಲ್ಲಿ ಎರಡು ರೈಲುಗಳು ಡಿಕ್ಕಿ : 8 ಮಂದಿ ಸಾವು, 20 ಮಂದಿಗೆ ಗಾಯ

ವಿಜಯನಗರಂ : ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಭಾನುವಾರ ಎರಡು ರೈಲುಗಳು ಡಿಕ್ಕಿಯಾಗಿ ಎಂಟು ಪ್ರಯಾಣಿಕರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಪ್ರಯಾಣಿಕರ ರೈಲು ವಿಶಾಖಪಟ್ಟಣದಿಂದ ರಾಯಗಡಕ್ಕೆ ಹೋಗುತ್ತಿತ್ತು. ಪೂರ್ವ ಕರಾವಳಿ ರೈಲ್ವೆ ವಲಯದ ವಾಲ್ಟೇರ್ ವಿಭಾಗದ ವಿಜಯನಗರ-ಕೊತ್ತವಲಸ ರೈಲ್ವೆ ವಿಭಾಗದಲ್ಲಿ ಅಳಮಂಡ ಮತ್ತು ಕಂಟಕಪಲ್ಲಿ ನಡುವೆ ಪ್ರಯಾಣಿಕ ರೈಲುಗಳು ಸಂಜೆ 7 ಗಂಟೆ ಸುಮಾರಿಗೆ ಹಳಿತಪ್ಪಿದವು.
ಜಿಲ್ಲಾಧಿಕಾರಿ ಎಸ್.ನಾಗಲಕ್ಷ್ಮಿ ಮಾತನಾಡಿ, ವಿಜಯನಗರ ಜಿಲ್ಲೆಯ ಕಂಟಕಪಲ್ಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಟು ಪ್ರಯಾಣಿಕರು ಮೃತಪಟ್ಟಿದ್ದಾರೆ. 32 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಶಾಖಪಟ್ಟಣಕ್ಕೆ ರವಾನಿಸಲಾಗಿದೆ.
ಭಾನುವಾರ ಸಂಜೆ 7 ಗಂಟೆ ಸುಮಾರಿಗೆ 08504 ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು 08532 ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿನ ಎರಡು ಹಿಂಭಾಗದ ಕೋಚ್‌ಗಳು ಮತ್ತು ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್‌ನ ರೈಲು ಇಂಜಿನ್ ಹಳಿತಪ್ಪಿವೆ.

“ವಿಜಿನಗರದಿಂದ ರಾಯಗಢಕ್ಕೆ ಪ್ರಯಾಣಿಕರೊಂದಿಗೆ ಪ್ರಯಾಣಿಸುತ್ತಿದ್ದ ರೈಲು ವಿಶಾಕಪಟ್ಟಣದಿಂದ ಪಲಾಸಕ್ಕೆ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದ ನಂತರ ಬೋಗಿಗಳು ಹಳಿತಪ್ಪಿದವು” ಎಂದು ಪೂರ್ವ ಮಧ್ಯ ರೈಲ್ವೆ ಸಿಪಿಆರ್‌ಒ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ರೈಲುಗಳ ಡಿಕ್ಕಿಗೆ ಮಾನವ ದೋಷ ಕಾರಣ ಎಂದು ಶಂಕಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ X (ಹಿಂದಿನ ಟ್ವಿಟರ್) ನಲ್ಲಿ “ಪ್ರಧಾನಿ ಮೋದಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅಲಮಂಡ ಮತ್ತು ಕಂಟಕಪಲ್ಲೆ ವಿಭಾಗದ ನಡುವೆ ದುರದೃಷ್ಟಕರ ರೈಲು ಹಳಿತಪ್ಪಿದ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ” ಎಂದು ಹೇಳಿದರು. ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದ್ದಾರೆ. ಪ್ರಧಾನಿಯವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಾರೆ ಮತ್ತು ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ ಎಂದು ಎಕ್ಸ್ ಪೋಸ್ಟ್ ಹೇಳಿದೆ.

ಪ್ರಮುಖ ಸುದ್ದಿ :-   ಪವಾಡ....| ಆಸ್ಪತ್ರೆಯಲ್ಲಿ 'ಮೃತ' ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ...!

ಘಟನೆಯ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಮತ್ತು ವಿಶಾಖಪಟ್ಟಣಂ ಮತ್ತು ವಿಜಯನಗರದ ಹತ್ತಿರದ ಜಿಲ್ಲೆಗಳಿಂದ ಘಟನಾ ಸ್ಥಳಕ್ಕೆ ಸಾಧ್ಯವಾದಷ್ಟು ಆಂಬ್ಯುಲೆನ್ಸ್‌ಗಳನ್ನು ಕಳುಹಿಸಲು ಆದೇಶಿಸಿದ್ದಾರೆ. ಗಾಯಾಳುಗಳಿಗೆ ತ್ವರಿತ ವೈದ್ಯಕೀಯ ಸೇವೆಗಳನ್ನು ಒದಗಿಸಲು ಆರೋಗ್ಯ, ಪೊಲೀಸ್ ಮತ್ತು ಕಂದಾಯ ಸೇರಿದಂತೆ ಇತರ ಸರ್ಕಾರಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಮುಖ್ಯಮಂತ್ರಿ ರೈಲ್ವೆ ಅಧಿಕಾರಿಗಳಿಗೆ ಆದೇಶಿಸಿದರು.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಮಾತನಾಡಿ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ, ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಪ್ರಧಾನಿ ಮೋದಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ನಾನು ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ” ಎಂದು ರೈಲ್ವೆ ಸಚಿವರು ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ ಪ್ರತಿಯೊಬ್ಬರ ಕುಟುಂಬದವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement