ಕೇರಳದ ಧಾರ್ಮಿಕ ಸಭೆಯಲ್ಲಿ ಸರಣಿ ಸ್ಫೋಟ : 1 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಭಾನುವಾರ ಬೆಳಗ್ಗೆ ಕೇರಳದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸರಣಿ ಸ್ಫೋಟಗಳು ಸಂಭವಿಸಿದ್ದು. ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ ಮತ್ತು50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಚ್ಚಿಯಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಕಲಮಸ್ಸೆರಿಯ ಕೇಂದ್ರದಲ್ಲಿ ನಡೆದ ಯೆಹೋವನ ಸಾಕ್ಷಿಗಳ ಸಮಾವೇಶದಲ್ಲಿ ಈ ಘಟನೆ ನಡೆದಿದೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,000 ಜನರು ಭಾಗವಹಿಸಿದ್ದರು. ಅಧಿಕಾರಿಗಳ ಪ್ರಕಾರ ಮೊದಲನೆಯ ಸ್ಫೋಟ ಬೆಳಿಗ್ಗೆ 9.47ರ ಸುಮಾರಿಗೆ ಸಂಭವಿಸಿದೆ. ದಾಳಿಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು ಬಳಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಸ್ಫೋಟಕಗಳನ್ನು ಟಿಫಿನ್ ಬಾಕ್ಸ್‌ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಅಕ್ಟೋಬರ್ 27ರಂದು ಆರಂಭವಾದ ಮೂರು ದಿನಗಳ ಸಭೆಗೆ ಭಾನುವಾರ ಕೊನೆಯ ದಿನವಾಗಿತ್ತು.ಒಟ್ಟು ಮೂರು ಸ್ಪೋಟಗಳು ಸಂಭವಿಸಿದ್ದು, ಕನಿಷ್ಠ 10 ಜನರು ಶೇಕಡಾ 50 ಕ್ಕಿಂತ ಹೆಚ್ಚು ಜನ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಸೆಕ್ರೆಟರಿಯೇಟ್‌ನಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಅವರು ಸ್ಫೋಟದ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸುವ ಸಾಧ್ಯತೆಯಿದೆ.

ಘಟನೆಯಲ್ಲಿ ಒಬ್ಬ ಮಹಿಳೆ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ದೃಢಪಡಿಸಿದ ಪಿಣರಾಯಿ ವಿಜಯನ್, “ಇದು ಅತ್ಯಂತ ದುರದೃಷ್ಟಕರ ಘಟನೆ, ನಾವು ಘಟನೆಗೆ ಸಂಬಂಧಿಸಿದಂತೆ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ. ಎರ್ನಾಕುಲಂನಲ್ಲಿರುವ ಎಲ್ಲಾ ಉನ್ನತ ಅಧಿಕಾರಿಗಳು ಇದ್ದಾರೆ, ನಾವು ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಡಿಜಿಪಿ ಜೊತೆ ಮಾತನಾಡಿದ್ದು, ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಪಡೆಯುತ್ತೇವೆ ಎಂದು ಹೇಳಿದ್ದಾರೆ.
ಕ್ರಿಶ್ಚಿಯನ್ ಗುಂಪಿನ ಸಮಾವೇಶ ಕೇಂದ್ರದಲ್ಲಿ ಸ್ಫೋಟ ಸಂಭವಿಸಿದೆ. ಏತನ್ಮಧ್ಯೆ, 4 ಸದಸ್ಯರ ಎನ್ಐಎ ತಂಡವು ಸ್ಥಳೀಯ ಪೊಲೀಸರೊಂದಿಗೆ ಘಟನೆಯ ತನಿಖೆಗೆ ಸ್ಥಳಕ್ಕೆ ಧಾವಿಸಿದೆ. ಅಲ್ಲದೆ, ಓರ್ವ ಅಧಿಕಾರಿ ಸೇರಿದಂತೆ ಎಂಟು ಸದಸ್ಯರ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ತಂಡವು ಸ್ಫೋಟದ ಬಗ್ಗೆ ವಿಚಾರಣೆ ನಡೆಸಲು ಕೇರಳಕ್ಕೆ ತೆರಳಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಸ್ಫೋಟದ ಬಗ್ಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ದೃಶ್ಯಗಳು ಅಗ್ನಿಶಾಮಕ ರಕ್ಷಣಾ ತಂಡ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿ ಜನರನ್ನು ಸ್ಥಳದಿಂದ ಜನರನ್ನು ಸ್ಥಳಾಂತರಿಸುವುದನ್ನು ತೋರಿಸಿದೆ.

ಪ್ರಮುಖ ಸುದ್ದಿ :-   ಡಿಸೆಂಬರ್‌ 6ಕ್ಕೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಭೆ

ವೀಡಿಯೊ ದೃಶ್ಯಗಳು ಸ್ಫೋಟದಿಂದಾಗಿ ಕನ್ವೆನ್ಶನ್ ಸೆಂಟರ್‌ನೊಳಗೆ ಬೆಂಕಿಯಲ್ಲಿ ಆವರಿಸಿರುವುದನ್ನು ತೋರಿಸಿದೆ, ಜನರು ಭಯದಿಂದ ಕಿರುಚುತ್ತಿದ್ದರು. ಸ್ಫೋಟದ ನಂತರ ನೂರಾರು ಜನರು ಸಮಾವೇಶ ಕೇಂದ್ರದ ಹೊರಗೆ ಕಾಣಿಸಿಕೊಂಡರು. ಮೂರು ಸ್ಫೋಟದ ಸದ್ದು ಕೇಳಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.
ರಜೆಯಲ್ಲಿರುವ ವೈದ್ಯರು ಸೇರಿದಂತೆ ಎಲ್ಲ ಆರೋಗ್ಯ ಕಾರ್ಯಕರ್ತರಿಗೆ ಕೂಡಲೇ ಕೆಲಸಕ್ಕೆ ಹಾಜರಾಗುವಂತೆ ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೂಚನೆ ನೀಡಿದ್ದಾರೆ. ಕಲಮಸ್ಸೆರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಆರೋಗ್ಯ ಇಲಾಖೆ ನಿರ್ದೇಶಕರು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಅವರು ಸೂಚಿಸಿದ್ದಾರೆ.
ಸುಮಾರು 40 ಜನರು ಗಾಯಗೊಂಡಿದ್ದಾರೆ, ಹತ್ತು ವರ್ಷದ ಮಗು ತೀವ್ರ ಸುಟ್ಟಗಾಯಗಳನ್ನು ಹೊಂದಿದ್ದು, ಗಂಭೀರ ಸ್ಥಿತಿಯಲ್ಲಿದೆ. ಒಬ್ಬರು ಮೃತಪಟ್ಟಿದ್ದಾರೆ ಮತ್ತು ಆಕೆಯ ದೇಹವು ಕಲಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿದೆ. ಏಳು ಮಂದಿ ಕಲಮಸ್ಸೆರಿ ವೈದ್ಯಕೀಯ ಕಾಲೇಜಿನಲ್ಲಿ ಐಸಿಯುನಲ್ಲಿದ್ದಾರೆ. ಗಾಯಾಳುಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಸಂಖ್ಯೆ 50 ಕ್ಕೆ ತಲುಪಬಹುದು ಎಂದು ಆರೋಗ್ಯ ಸಚಿವರು ಹೇಳಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಅಥವಾ ದ್ವೇಷದ ಸಂದೇಶಗಳನ್ನು ಹರಡದಂತೆ ಕೇರಳ ಡಿಜಿಪಿ ಜನರನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಸ್ಫೋಟದ ಕಾರಣವನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ತಿಳಿಸಿರುವ ಕೈಗಾರಿಕಾ ಸಚಿವ ಮತ್ತು ಕಲಮಶ್ಶೇರಿ ಶಾಸಕ ಪಿ ರಾಜೀವ್, “ನಾನು ಎಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ, ಎಲ್ಲಾ ನಿರ್ದೇಶನಗಳನ್ನು ನೀಡಲಾಗಿದೆ, ನಾವು ಕಾರಣವನ್ನು ಗುರುತಿಸಬೇಕಾಗಿದೆ. ಎಲ್ಲಾ ಪರಿಶೀಲನೆಗಳನ್ನು ಪೂರ್ಣಗೊಳಿಸಲಾಗುವುದು. ಸದ್ಯಕ್ಕೆ ಯಾರನ್ನೂ ಸ್ಥಳದ ಸಮೀಪಕ್ಕೆ ಅನುಮತಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಆಘಾತಕಾರಿ....: ಗುಜರಾತಿನಲ್ಲಿ 6 ತಿಂಗಳಲ್ಲಿ ಹೃದಯಾಘಾತದಿಂದ ಸಾವಿಗೀಡಾದವರಲ್ಲಿ 80% ರಷ್ಟು ಮಂದಿ 11-25 ವರ್ಷದವರು...!

4.7 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement