ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ : ಶ್ರೀನಗರದ ಡೌನ್ಟೌನ್ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಭಾನುವಾರ ಈದ್ಗಾ ಮೈದಾನದಲ್ಲಿ ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಉಗ್ರರು ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಬಲ ಹಿಂಪಡೆದ ಮೂವರು ಪಕ್ಷೇತರ ಶಾಸಕರು : ಸಂಕಷ್ಟದಲ್ಲಿ ಹರಿಯಾಣದ ಬಿಜೆಪಿ ಸರ್ಕಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement