ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ, ಹಾಸನ, ಬೀದರ, ಬೆಳಗಾವಿ, ಹಾವೇರಿ ಸೇರಿದಂತೆ 90 ಕಡೆ ದಾಳಿ ಮಾಡಿದ್ದಾರೆ.
ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿಯೇ 1೦ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಆರ್‌ ಪುರದಲ್ಲಿನ ಎಆರ್ ಓ ಚಂದ್ರಪ್ಪ ಬಿರಜ್ಜನವರ್​​​​​ಗೆ ಸಂಬಂಧಪಟ್ಟ ಮೂರು ಕಡೆ ದಾಳಿ ಮಾಡಲಾಗಿದೆ. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್.ನಗರ ವಲಯಾಧಿಕಾರಿಯಾಗಿರುವ ಚಂದ್ರಪ್ಪ ಕೆ.ಆರ್.ಪುರಂ ನಿವಾಸದಲ್ಲಿ ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ
ಇಬ್ಬರ ಅಧಿಕಾರಿಗಳ ವಾಹನಗಳಲ್ಲಿ ಪ್ರತ್ಯೇಕ ತಂಡವಾಗಿ ಆಗಮಿಸಿದ ಅಧಿಕಾರಿಗಳು ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಚಿತ್ರದುರ್ಗದ ಲೋಕಾಯುಕ್ತ ಎಸ್ಪಿ ವಾಸುದೇವ ರಾವ್ ನೇತೃತ್ವದಲ್ಲಿ ಈ ಎರಡೂ ದಾಳಿ ನಡೆಸಲಾಗಿದೆ.
ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರಿಗೆ ಸೇರಿದ ಹಿರಿಯೂರು ನಗರದ ಚಂದ್ರಾ ಲೇಔಟ್ ನಲ್ಲಿರುವ ಮನೆಗೆ ಒಂದು ತಂಡ ಆಗಮಿಸಿದ್ದರೆ, ನಾಯ್ಕ್ ಅವರಿಗೆ ಸೇರಿದ್ದೆನ್ನಲಾಗಿರುವ ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಗೆ ಎರಡನೇ ತಂಡ ಹೋಗಿದೆ ಎಂದು ವರದಿಯಾಗಿದೆ.
ಅಧಿಕಾರಿಗಳ ಇನ್ನೊಂದು ತಂಡ, ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದು, ಇವರಿಗೇ ಸೇರಿದ್ದು ಎಂದು ಹೇಳಲಾದ ಹಿರಿಯೂರು ನಗರದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಲಾಗಿದೆ.
ಹಾಸನದಲ್ಲೂ ದಾಳಿ
ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಅಧಿಕಾರಿ ನಾರಾಯಣ ಅವರ ಮನೆ ಹಾಗೂ ಗೊರೂರು ಕೆಪಿಟಿಸಿಎಲ್ ಕಚೇರಿಯಲ್ಲಿ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ನಡೆದಿದೆ. ಲೋಕಾಯುಕ್ತ ಡಿಓ ಎಸ್ಪಿ ಅಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಶಾಸಕ ಹರೀಶ ಪೂಂಜಾ ವಿರುದ್ಧ ಪ್ರಕರಣ ದಾಖಲು

ಬೀದರಿನಲ್ಲಿ ಲೋಕಾಯುಕ್ತ ದಾಳಿ
ಬೀದರಿನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅರಣ್ಯ ಇಲಾಖೆಯ ಆರ್ ಎಫ್ ಓ ಬಸವರಾಜ್ ಡಾಂಗೆ ಅವರ ಕಚೇರಿ ಹಾಗೂ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೀದರ್ ನಗರದ ಕೆಇಬಿ ರಸ್ತೆಯಲ್ಲಿರುವ ಅರಣ್ಯ ಇಲಾಖೆ ಕಚೇರಿ ಮತ್ತು ಕಲಬುರಗಿಯ ನಿವಾಸದ‌ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಕರ್ನೂಲ್ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.
ಬೆಳಗಾವಿಯಲ್ಲಿ ಲೋಕಾಯುಕ್ತ ದಾಳಿ
ಬೆಳಗಾವಿಯ ಪಂಚಾಯತ್ ರಾಜ ಇಲಾಖೆ ಎಇಇ ಎಂ.ಎಸ್.ಬಿರಾದಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಹನುಮಂತರಾಯ್ ನೇತೃತ್ವದಲ್ಲಿ ದಾಳಿ ನಡೆದಿದೆ. ಬಿರಾದಾರ ಅವರ ಬೆಳಗಾವಿ ನಿವಾಸ, ಕಿತ್ತೂರು, ಖಾನಾಪುರದ ನಿವಾಸಗಳ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಕಲಬುರ್ಗಿಯಲ್ಲಿ ದಾಳಿ…
ಲೋಕಾಯುಕ್ತ ಅಧಿಕಾರಿಗಳ ಮೂರು ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ. ಕಲಬುರಗಿ ಜಿಲ್ಲೆಯ ಟೌನ್ ಪ್ಲ್ಯಾನರ್ ಅಪ್ಪಾಸಾಹೇಬ್ ಕಾಂಬಳೆ ಮನೆ ಮೇಲು ದಾಳಿ ಮಾಡಿದ್ದಾರೆ. ಕಲಬುರಗಿಯ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಾಮತೀರ್ಥ ನಗರದ ನಿವಾಸ, ಆಟೋ ನಗರದಲ್ಲಿ ಇರೋ ಕಾರ್ಖಾನೆ ಮೇಲೆ ದಾಳಿ ಮಾಡು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement