ದೆಹಲಿ ಮದ್ಯ ನೀತಿ ಪ್ರಕರಣ : ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರಿಗೆ ದೊಡ್ಡ ಹಿನ್ನಡೆಯಲ್ಲಿ, ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
ಪ್ರಕರಣದಲ್ಲಿ 338 ಕೋಟಿ ರೂಪಾಯಿಗಳ ಹಣದ ಜಾಡು “ತಾತ್ಕಾಲಿಕವಾಗಿ ಸ್ಥಾಪಿಸಲಾಗಿದೆ” ಎಂಬ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನಿರಾಕರಿಸಿತು.
ಸಿಸೋಡಿಯಾ ಸಲ್ಲಿಸಿದ್ದ ಎರಡು ಪ್ರತ್ಯೇಕ ಜಾಮೀನು ಅರ್ಜಿಗಳ ತೀರ್ಪನ್ನು ಅಕ್ಟೋಬರ್ 17 ರಂದು ಕಾಯ್ದಿರಿಸಿದ್ದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಇಂದು ಸೋಮವಾರ ತೀರ್ಪು ಪ್ರಕಟಿಸಿತು. ಒಂದು ವೇಳೆ ಪ್ರಕರಣದ ತನಿಖೆಯು ಮಂದಗತಿಯಲ್ಲಿ ಸಾಗಿದರೆ ಮತ್ತೆ ಸಿಸೋಡಿಯಾ ಅವರು ಜಾಮೀನಿಗೆ ಅರ್ಜಿ ಹಾಕಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಲ್ಲದೆ ಆರರಿಂದ ಎಂಟು ತಿಂಗಳೊಳಗಾಗಿ ತನಿಖೆ ಮುಗಿಸಬೇಕು ಎಂದು ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಒಂದು ವೇಳೆ ತನಿಖಾ ಹಂತದಲ್ಲಿ ವಿಳಂಬವಾದರೆ ನಂತರ ಸಿಸೋಡಿಯಾ ಮತ್ತೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಪೀಠ ಹೇಳಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಪ್ರಕರಣಗಳಲ್ಲಿ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement