ನವೆಂಬರ್ 5ರ ವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ನವೆಂಬರ್ 5ರವರೆಗೆ ಗುಡುಗು, ಸಿಡಿಲಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಳೆಯಾಗಲಿದೆ.
ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಳೆಯಾಗಲಿದೆ ಎಂದು ಹೇಳಿದೆ. ನವೆಂಬರ್‌ ತಿಂಗಳಲ್ಲಿ ರಾಜ್ಯಕ್ಕೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement