ಮಡಿಕೇರಿ : ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು

ಮಡಿಕೇರಿ: ಮಣ್ಣಿನ ದಿಬ್ಬ ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಮಂಗಳವಾರ ನಡೆದಿದೆ.
ಮಡಿಕೇರಿಯ ರೆಡ್ ಕ್ರಾಸ್ ಬಳಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿಯ ಬರೆ ಕುಸಿತದಿಂದ ಒಟ್ಟು ಐವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅವರಲ್ಲಿ ಮೂವರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಇಬ್ಬರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಸಪ್ಪ, ನಿಂಗಪ್ಪ ಹಾಗೂ ಆನಂದ ಎಂದು ಗುರುತಿಸಲಾಗಿದೆ.
ಒಟ್ಟು 9 ಮಂದಿ ಕಾರ್ಮಿಕರು ಮಡಿಕೇರಿಗೆ ಕೆಲಸಕ್ಕೆ ಬಂದಿದ್ದರು ಎನ್ನಲಾಗಿದೆ. ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಬರೆ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದರು. ಕಾರ್ಮಿಕ ರಾಜು ಎಂಬವರನ್ನು ಇತರ ಕಾರ್ಮಿಕರು ರಕ್ಷಿಸಿದ್ದಾರೆ. ಆದರೆ ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡು ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಶಾಸಕ ಡಾ. ಮಂತರ್ ಗೌಡ ಹಾಗೂ ಎಸ್ಪಿ ರಾಮರಾಜನ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಹಿಂದಿ ರಾಜ್ಯಗಳಿಗೆ ʼಗೋ ಮೂತ್ರʼ ರಾಜ್ಯಗಳೆಂದು ಟೀಕಿಸಿದ ಡಿಎಂಕೆ ಸಂಸದ : ಹೇಳಿಕೆಗೆ ಪಕ್ಷಾತೀತವಾಗಿ ಖಂಡನೆ ನಂತರ ಸೆಂಥಿಲ್ ಕುಮಾರ ಕ್ಷಮೆಯಾಚನೆ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement