ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲು

 ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ರಮೇಶ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.
ಡಿ.ಕೆ.ಶಿವಕುಮಾರ ಪುಕ್ಕಲ, ಮೋಸಗಾರ, ಸಿ.ಡಿ ಮಾಸ್ಟರ್, ಮಾಜಿ ಮಂತ್ರಿಯಾಗುತ್ತಾರೆ ಎಂದು ರಮೇಶ ಜಾರಕಿಹೊಳಿ ನಿನ್ನೆ ಹೇಳಿದ್ದರು. ಡಿ.ಕೆ.ಶಿವಕುಮಾರ ಎಲ್ಲರ ಸಿ.ಡಿ. ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಾರೆ. ಅವರೊಬ್ಬ ಸಿಡಿ ಮಾಸ್ಟರ್, ಪುಕ್ಕಲ. ಯಾವಾಗಲೂ ಮೋಸ ಮಾಡುವ ಅವರಿಗೆ ಹೋರಾಟ ಮಾಡುವ ಶಕ್ತಿ ಇಲ್ಲ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.
ಇಪ್ಪತ್ತು ದಿನಗಳ ಹಿಂದೆ ಡಿ.ಕೆ. ಶಿವಕುಮಾರ ಸಿ.ಡಿ ಇದೆ ಎಂದು ಬ್ಲಾಕ್ ಮೇಲ್ ಮಾಡಿದ್ದಾರೆ. ಮಾಜಿ ಶಾಸಕ ನಾಗರಾಜ ಅವರಿಗೆ ಹೆದರಿಸಿದ್ದಾರೆ ನಿಂದು ರಮೇಶ್‌ ಜಾರಕಿಹೊಳೀದು ಜಾಸ್ತಿಯಾಗಿದೆ, ಎಸ್ಐಟಿ ಕ್ಯಾನ್ಸಲ್ ಮಾಡಿ ಪ್ರಕರಣದ ತನಿಖೆ ಮಾಡಿಸುವುದಾಗಿ ಎಂದು ಬೆದರಿಕೆ ಹಾಕಿದ್ದಾರೆ ಎಂದು ಕಿಡಿಕಾರಿದ್ದರು.
ಏಕವಚನದಲ್ಲಿ ಡಿಕೆ ಶಿವಕುಮಾರ ಅವರನ್ನು ನಿಂದಿಸಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗರು ಸೋಮವಾರ ರಾತ್ರಿ ಸದಾಶಿವನಗರದಲ್ಲಿರುವ ರಮೇಶ ಜಾರಕಿಹೊಳಿ ನಿವಾಸದ ಬಳಿ ಅವರ ಮನೆ ಗೋಡೆಗಳಿಗೆ ಅವಾಚ್ಯ ಬರಹಗಳಿರುವ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರಮುಖ ಸುದ್ದಿ :-   ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement