ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಸ್ವಪಕ್ಷೀಯ ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
‘ನಮ್ಮದು ರಾಷ್ಟ್ರೀಯ ಪಕ್ಷ. ಏನೇ ತೀರ್ಮಾನವಾದರೂ ಅದು ಹೈಕಮಾಂಡ್ ಜೊತೆ ಚರ್ಚೆ ನಡೆದ ನಂತರವೇ ತೀರ್ಮಾನಿಸಲಾಗುತ್ತದೆ. ಹೀಗಾಗಿ ಉಪಮುಖ್ಯಮಂತ್ರಿ ನೇಮಕದ ಬಗ್ಗೆಯೂ ಹೈಕಮಾಂಡ್‌ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ರಮೇಶ್ ಜಾರಕಿಹೊಳಿ ಈ ಸರ್ಕಾರ ಬೀಳಲಿದೆ ಎಂದು ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಸೋತಿದ್ದಾರೆ, ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿಕೊಟ್ಟಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ. ಆದರೆ ಈ ಫಲಿತಾಂಶದಿಂದ ಬಿಜೆಪಿಯವರಿಗೆ ಭ್ರಮನಿರಸನವಾಗಿದೆ. ಹೀಗಾಗಿ ಅವರಿಗೆ ಅಧಿಕಾರ ಇಲ್ಲದೆ ಸುಮ್ಮನಿರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂಥ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು. ಮತ್ತೆ ಅಪರೇಷನ್ ಕಮಲ್‌ ಮಾಡಲು ಪ್ರಯತ್ನ ಮಾಡುತ್ತಾರೆ. ಆದರೆ ಅದು ಸಾಧ್ಯವಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿಸುತ್ತಿದೆ. ನಮ್ಮ ಸಂಪುಟದ ನಾಲ್ವರು ಸಚಿವರು ದೆಹಲಿಗೆ ಹೋದರೂ ಪ್ರಧಾನಿ ಮತ್ತು ಸಂಬಂಧಿಸಿದ ಸಚಿವರು ಭೇಟಿಗೆ ಸಮಯವೇ ನೀಡುತ್ತಿಲ್ಲ. ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರದಿಂದ ಬರ ಪರಿಹಾರ ಕೊಡಿಸುವುದನ್ನು ಬಿಟ್ಟು ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ಹೋಗುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಎಂದು ಪ್ರಶ್ನಿಸಿದರು.

ಪ್ರಮುಖ ಸುದ್ದಿ :-   ಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement