ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್‌ ಪತ್ತೆಯಾಗಿದೆ.
ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ.
ಝೀಕಾ ವೈರಸ್‌ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳಲ್ಲಿ ಮಾರಣಾಂತಿಕ ವೈರಸ್‌ ಇದೆಯೇ ಎಂದು ಪರಿಣಿತರು ಪರೀಕ್ಷೆ ನಡೆಸಿದ್ದರು. ಇದರ ಅನ್ವಯ ಚಿಕ್ಕಬಳ್ಳಾಪುರದ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಪರೀಕ್ಷಿಸಲಾಗಿತ್ತು. ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ವೈರಸ್‌ ಪತ್ತೆಯಾಗಿದೆ. ಮಾರಕ ವೈರಸ್‌ಗಳು ಪತ್ತೆಯಾದ ಬೆನ್ನಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಿದ್ದಾರೆ.

ಜಿಲ್ಲೆಯಲ್ಲಿ ಮನುಷ್ಯರಲ್ಲಿ ಝೀಕಾ ವೈರಸ್‌ ಪತ್ತೆಯಾಗಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಒಟ್ಟು 37 ಮಂದಿಯ ರಕ್ತದ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಸದ್ಯಕ್ಕೆ ತಲಕಾಯಲಬೆಟ್ಟ ವ್ಯಾಪ್ತಿಯ ಗ್ರಾಮಗಳಲ್ಲಿಕಟ್ಟೆಚ್ಚರ ವಹಿಸಲಾಗಿದ್ದು, ಜ್ವರ ಕಾಣಿಸಿಕೊಂಡುವರು ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಡೆಂಗ್ಯೂ, ಚಿಕನ್ ಗುನ್ಯಾ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳ ಮೂಲಕ ಝೀಕಾ ವೈರಸ್ ಹರಡುತ್ತದೆ. ಇದು ಒಂದು ರೀತಿಯ ಸೋಂಕಾಗಿದೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ಹುಟ್ಟಿಕೊಳ್ಳುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ಝೀಕಾ ವೈರಸ್ ಲಕ್ಷಣಗಳು:
ಈಡಿಸ್‌ ಸೊಳ್ಳೆಯಿಂದ ಹಬ್ಬುತ್ತದೆ. ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಆರಂಭದಲ್ಲಿ ಸೌಮ್ಯವಾಗಿದ್ದು, ನಂತರದಲ್ಲಿ ಜೀವ ತೆಗೆಯುವ ಮಾರಕ ರೋಗಗಳ ರೀತಿ ಬದಲಾಗುತ್ತವೆ. ಅದರಂತೆಯೇ ಝೀಕಾ ವೈರಸ್‌ ಕೂಡ ಹಗಲಿನಲ್ಲಿ ಕಚ್ಚುವ ಈಡಿಸ್‌ ಸೊಳ್ಳೆಗಳ ಮೂಲಕ ಹರಡುತ್ತದೆ.
ತಲೆನೋವು, ಕಣ್ಣು ಕೆಂಪಗಾಗುವುದು, ಜ್ವರ, ಚರ್ಮದ ಮೇಲೆ ಅಲ್ಲಲ್ಲಿ ದದ್ದುಗಳು, ಮೈಕೈ ನೋವು, ಮಾಂಸಖಂಡಗಳ ಸೆಳೆತ, ಕೀಲು ನೋವು ಇತ್ಯಾದಿ. ಜಿಕಾ ವೈರಸ್‌ ಲಕ್ಷಣಗಳು ಏಳು ದಿನಗಳವರೆಗೆ ಇರುತ್ತದೆ. ಅದರಿಂದ ಆಸ್ಪತ್ರೆಗೆ ಸೇರಬೇಕಾದ ಅನಿವಾರ್ಯತೆ ಉಂಟಾಗುವುದಿಲ್ಲ ಮತ್ತು ಸಾವಿನ ಪ್ರಮಾಣ ತುಂಬಾ ಕಡಿಮೆ ಇದೆ. ಕೆಲವು ಜನರಿಗೆ ಈ ವೈರಸ್ ಅವರ ದೇಹದಲ್ಲಿರುವುದು ಕೂಡ ಅರಿವಿಗೆ ಬರುವುದಿಲ್ಲ. ಆದರೆ ಗರ್ಭಿಣಿ ಮಹಿಳೆಯರು ಈ ಸೋಂಕು ತಗುಲದಂತೆ ನೋಡಿಕೊಳ್ಳಬೇಕು. ಕೆಲವರಿಗೆ ಇದು ಮಾರಕವಾಗಬಹುದು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement