ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ದಿಢೀರ್‌ ಬುಲಾವ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ಮೂವರು ನಾಯಕರಿಗೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ ಎಂದು ವರದಿಯಾಗಿದೆ.
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿ.ಸಿ. ಮೋಹನ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಇನ್ನೂ ಆಗಿಲ್ಲ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೂ ಆಯ್ಕೆಯಾಗಬೇಕಿದೆ. ಇದರ ಜೊತೆಗೆ ಇನ್ನು ಐದಾರು ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
ಅಲ್ಲದೆ, ರಾಜ್ಯದ ಕೆಲ ನಾಯಕರು ದೆಹಲಿಯ ಬಿಜೆಪಿ ವರಿಷ್ಠರು ರಾಜ್ಯದ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆ ಈ ಬೆಳವಣಿಗೆ ನಡೆದಿದ್ದು, ಮೂವರು ನಾಯಕರನ್ನು ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

 

ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement