ವಿಶ್ವಕಪ್‌ 2023 : ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ವಿರಾಟ್‌ ಕೊಹ್ಲಿ

ನವದೆಹಲಿ : ಭಾರತದ ಸ್ಟಾರ್ ಬ್ಯಾಟರ್‌ ವಿರಾಟ ಕೊಹ್ಲಿ ಏಕದಿ ಪಂದ್ಯಗಳಲ್ಲಿ ಮತ್ತೊಂದು ವಿಶ್ವ ದಾಖಲೆ ಬರೆದಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ನಡೆದ ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಅವರು ಒಂದು ವರ್ಷದಲ್ಲಿ 1000 ರನ್ ಪೂರೈಸಿದ ಅವರು ಈ ಸಾಧನೆಯನ್ನು ಒಟ್ಟು ಎಂಟು ಬಾರಿ ಮಾಡಿದ್ದಾರೆ.
ಈ ಮೂಲಕ ಭಾರತದ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ವೃತ್ತಿಜೀವನದಲ್ಲಿ ಏಳು ಬಾರಿ ಈ ಸಾಧನೆ ಮಾಡಿದ ಹಿಂದಿನ ದಾಖಲೆಯನ್ನು ಮುರಿದಿದ್ದಾರೆ.
ವಾಂಖೆಡೆ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ (88) ರನ್‌ ಗಳಿಸಿದ್ದಾರೆ.
ಈ ಮೂಲಕ 2023ನೇ ಸಾಲಿನಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಕೊಹ್ಲಿ ಸಹಸ್ರ ರನ್‌ಗಳ ಸಾಧನೆ ಮಾಡಿದ್ದಾರೆ.
ವಿರಾಟ್‌ ಕೊಹ್ಲಿ ಅವರು 2011, 2012, 2013, 2014, 2017, 2018 ಮತ್ತು 2019 ಹಾಗೂ 2023 ರಲ್ಲಿ 1,000 ಕ್ಕೂ ಹೆಚ್ಚು ರನ್ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ, ತೆಂಡೂಲ್ಕರ್ ಅವರು 1994, 1996, 1997, 1998, 2000, 2003 ಮತ್ತು 2007ರಲ್ಲಿ ಈ ಸಾಧನೆ ಮಾಡಿದ್ದರು.

ಪ್ರಮುಖ ಸುದ್ದಿ :-   ದಕ್ಷಿಣ ಭಾರತದಲ್ಲಿ ತೀವ್ರ ನೀರಿನ ಬಿಕ್ಕಟ್ಟು : 42 ಜಲಾಶಯದಲ್ಲಿ ಕೇವಲ 17%ರಷ್ಟು ನೀರಿನ ಸಂಗ್ರಹ ಮಾತ್ರ ಬಾಕಿ

 

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement