ಅಫಜಲಪುರ : ಭೀಕರ ರಸ್ತೆ ಅಪಘಾತ, ನೇಪಾಳ ಮೂಲದ ಒಂದೇ ಕುಟುಂಬದ ಐವರು ಸಾವು

ಕಲಬುರಗಿ: ಜಿಲ್ಲೆಯ ಅಫಜಲಪುರ ಪಟ್ಟಣದ ಹೊರವಲಯದ ಬಳೂರ್ಗಿ ಕ್ರಾಸ್ ಬಳಿಯ ಅಂತಾರಾಜ್ಯ ರಸ್ತೆಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಅಫಜಲಪುರ ಪಟ್ಟಣದಲ್ಲಿ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದ ವ್ಯಕ್ತಿ ಬೈಕಿನಲ್ಲಿ ಪತ್ನಿ ಹಾಗೂ ಮೂವರು ಮಕ್ಕಳ ಸಮೇತ ದುಧನಿಯಿಂದ ಅಫಜಲಪುರಕ್ಕೆ ಆಗಮಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಅಫಜಲಪುರ ಮಾರ್ಗವಾಗಿ ಕಡಪ ಕಲ್ಲುಗಳನ್ನು ತುಂಬಿಕೊಂಡು ದುಧನಿ ಕಡೆಗೆ ಹೊರಟಿದ್ದ ಆಂಧ್ರಪ್ರದೇಶ ಮೂಲದ ಲಾರಿ ಹಾಗೂ ಬೈಕಿನ ಮಧ್ಯೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕಿನಲ್ಲಿ ಹೊರಟಿದ್ದ ತಂದೆ, ತಾಯಿ ಮತ್ತು ಮೂವರು ಮಕ್ಕಳು ಸಾವಿಗೀಡಾಗಿದ್ದಾರೆ. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಿತ್ತು.
ಘಟನಾ ಸ್ಥಳಕ್ಕೆ ಅಫಜಲಪುರ ಐಪಿಎಸ್ ಮಡಿವಾಳಪ್ಪ ಮತ್ತ ಸಿಬ್ಬಂದಿ ಧಾವಿಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಅಫಜಲಪುರ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಪ್ರಮುಖ ಸುದ್ದಿ :-   ಪಾಣೆಮಂಗಳೂರು : ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ಶವವಾಗಿ ಪತ್ತೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement