ಜಾತಿ ಗಣತಿ ವರದಿ ತಿರಸ್ಕರಿಸಲು ಒಕ್ಕಲಿಗರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದಿಂದ ಸಿದ್ದಪಡಿಸಲಾದ ‘ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಲು ಒಕ್ಕಲಿಗ ಸಮುದಾಯದ ಸಭೆ ನಿರ್ಧರಿಸಿದೆ.
ಎಚ್.ಕಾಂತರಾಜು ವರದಿ ಅವೈಜ್ಞಾನಿಕವಾಗಿದೆ, ಸಾಮಾಜಿಕ, ಆರ್ಥಿಕ ಸಮೀಕ್ಷೆ ಲೋಪ – ದೋಷಗಳಿಂದ ಕೂಡಿದೆ. ಶಂಕಾಸ್ಪದ ಮತ್ತು ತಪ್ಪು ಮಾಹಿತಿಯಿಂದ ಕೂಡಿರುವ ವರದಿ ಅಂಗೀಕರಿಸಿದರೆ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಹೀಗಾಗಿ ಇದನ್ನು ಸರ್ಕಾರ ಸ್ವೀಕರಿಸಬಾರದು ಎಂದು ಗುರುವಾರ ಒಕ್ಕಲಿಗರ ಸಂಘದ ಕಚೇರಿಯಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಸಭೆಯಲ್ಲಿ ಈ‌ ನಿರ್ಧಾರ ಕೈಗೊಳ್ಳಲಾಗಿದೆ.
.

ಕಾಂತರಾಜು ಆಯೋಗದ ವರದಿಯಲ್ಲಿ ಹಲವು ವ್ಯಕ್ತಿಗಳನ್ನು ಕೈ ಬಿಟ್ಟಿದ್ದು, ಶೇ.40-50ರಷ್ಟು ಜನರನ್ನು ಸೇರಿಸಿಕೊಂಡಿಲ್ಲ ಎಂದು ಒಕ್ಕಲಿಗ ಮುಖಂಡರು ಆತಂಕ ವ್ಯಕ್ತಪಡಿಸಿದರು. ಜಾತಿಗಣತಿಯಿಂದ ಅನೇಕ ಗ್ರಾಮಗಳು, ನಗರ ಕೇಂದ್ರಗಳಲ್ಲಿನ ಮನೆಗಳನ್ನು ಕೈಬಿಡಲಾಗಿದೆ ಎಂದು ಅವರು ಹೇಳಿದ್ದಾರೆ. ಸಮಾನಾಂತರವಾಗಿ ಒಕ್ಕಲಿಗ ಜಾತಿ ಗಣತಿಯನ್ನು ಕೈಗೊಳ್ಳಬೇಕು ಎಂದು ಒಕ್ಕಲಿಗ ಮುಖಂಡರು ಸಲಹೆ ನೀಡಿದ್ದಾರೆ.
ಪಕ್ಷಾತೀತವಾಗಿ ಎಲ್ಲ ಒಕ್ಕಲಿಗ ಶಾಸಕರು, ನಾಯಕರು, ಸ್ವಾಮೀಜಿಗಳು ಸೇರಿ ಒಂದು ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವರದಿಯನ್ನು ಸ್ವೀಕರಿಸದಂತೆ ಹಾಗೂ ಜಾತಿಗಣತಿಯನ್ನು ಮತ್ತೆ ಮಾಡುವಂತೆ ಒತ್ತಾಯಿಸಲು ನಿರ್ಧಾರ ಕೈಗೊಂಡಿದ್ದಾರೆ
ಅಲ್ಲದೆ,ಹಿಂದಿನ ಸರ್ಕಾರದ ಅವಧಿಯಲ್ಲಿ ಒಕ್ಕಲಿಗ ಸರ್ಕಾರದ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಿ ಹೊರಡಿಸಿದ್ದ ಆದೇಶವನ್ನು ಅನುಷ್ಠಾನಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲು ನಿರ್ಧರಿಸಲಾಯಿತು.
ಸಭೆಯಲ್ಲಿ ನಂಜಾವಧೂತ ಸ್ವಾಮೀಜಿ, ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವ ಚಲುವರಾಯಸ್ವಾಮಿ, ಶಾಸಕರಾದ ಸಿ.ಎನ್.ಅಶ್ವತ್ಥನಾರಾಯಣ,ಎಸ್.ಟಿ.ಸೋಮಶೇಖರ, ಅರಗ ಜ್ಞಾನೇಂದ್ರ, ಡಾ.ಎಚ್‌.ಡಿ.ರಂಗನಾಥ, ದಿನೇಶ್‌ ಗೂಳಿಗೌಡ ಮೊದಲಾದವರು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement