ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು.
ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, ಮುಖಂಡರು, ಕಾರ್ಯಕರ್ತರುಗಳನ್ನು ಭೇಟಿಯಾಗಿ ಸಮಾಲೋಚಿಸಿದ್ದಾರೆ. ಅಭ್ಯರ್ಥಿಗಳ ವರದಿ ಸಿದ್ಧವಾಗಿದೆ. ಪಕ್ಷದ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ, ಆದರೆ ವಿವಿಧ ಕಾರಣಗಳಿಗಾಗಿ ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದರು.
ನಮ್ಮ‌ ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಆದರೆ ನಮ್ಮಲ್ಲಿ ಅಸಮಾಧಾನ ಇದೆ ಎನ್ನುವ ಬಿಜೆಪಿಯವರಿಗೆ ಇಂದಿಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಸರ್ಕಾರ ರಚನೆ ಆಗಿ ಐದು ತಿಂಗಳು ಕಳೆದರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಬಿಜೆಪಿಯವರು ಬರ ಸಮೀಕ್ಷೆ ಮಾಡಲಿ, ಅವರು ದೆಹಲಿಗೂ ಹೋಗಿ ವರದಿ ಕೊಡಲಿ ಎಂದು ಲೇವಡಿ ಮಾಡಿದರು

ಪ್ರಮುಖ ಸುದ್ದಿ :-   ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement