ತುಲಾಭಾರ ಮಾಡುವಾಗ ಪೇಜಾವರ ಶ್ರೀಗಳ ಮೇಲೆ ಕಳಚಿ ಬಿದ್ದ ತಕ್ಕಡಿ

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಸಣ್ಣ ಅವಘಡ ನಡೆದಿದೆ. ತುಲಾಭಾರ ನಡೆಯುತ್ತಿದ್ದ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳಿಗೆ ಸಣ್ಣ ಗಾಯವಾಗಿದೆ.
ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬುಧವಾರ, ಶಿಷ್ಯರೆಲ್ಲಾ ಸೇರಿ ಪೇಜಾವರ ಶ್ರೀಗಳಿಗೆ ತುಲಾಭಾರ ಏರ್ಪಡಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತಕ್ಕಡಿ ಕುಸಿದು, ತಕ್ಕಡಿಯ ಮೇಲ್ಭಾಗ ಶ್ರೀಗಳ ತಲೆಯ ಮೇಲೆ ಬಿದ್ದಿದೆ. ಸ್ವಾಮೀಜಿ ಸುರಕ್ಷಿತವಾಗಿದ್ದಾರೆ.
ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ತುಲಾಭಾರ ನಡೆಯುತ್ತಿತ್ತು. ಆ ವೇಳೆ ತಕ್ಕಡಿಯ ಹಗ್ಗ ಕಳಚಿ ಬಿದ್ದಿದೆ. ತಕ್ಕಡಿಯ ಸರಳು ಪೇಜಾವರ ಶ್ರೀಗಳ ತಲೆಯ ಮೇಲೆ ಕಳಚಿ ಬಿದ್ದಿದ್ದು, ತಲೆಗೆ ಚಿಕ್ಕ ಗಾಯವಾಗಿದೆ. ಪೇಜಾವರ ಶ್ರೀಗಳು ಅನಾಹುತದಿಂದ ಪಾರಾಗಿದ್ದಾರೆ ಎಂದು ತಿಳಿಸಲಾಗಿದೆ.
ಪೇಜಾವರ ಶ್ರೀಗಳಿಗೆ ತಲೆಯ ಭಾಗಕ್ಕೆ ಗಾಯವಾಗಿದೆ. ನಾನು ಸುರಕ್ಷಿತವಾಗಿದ್ದೇನೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು...

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement