ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್ 8ರವರೆಗೂ ಮಳೆ ಮುನ್ಸೂಚನೆ

ಬೆಂಗಳೂರು : ನವೆಂಬರ್‌ 4ರಿಂದ 8ರವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವೆಂಬರ್‌ 4ರಿಂದ 8ರವರೆಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರು, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇನ್ನಳಿದ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯು ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೆ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಾತ್ರ ಗಡುಗು ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement