ನವೆಂಬರ್‌ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ ಹೆಗ್ಡೆ

ಬೆಂಗಳೂರು: ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ನ್ನಾಗಿ ತಮ್ಮ ಅವಧಿ ನವೆಂಬರ್ 24ಕ್ಕೆ ಮುಗಿಯಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ಹಿಂದಿನ ಕಾಂತರಾಜು ಆಯೋಗದ ವರದಿಯನ್ನು ಸಲ್ಲಿಸುವುದಾಗಿ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ತಿಳಿಸಿದ್ದಾರೆ.
ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು ಕ್ಷೇತ್ರಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಕಾಂತರಾಜು ವರದಿಯ ಕುರಿತು ಕೇಳಿ ಬರುತ್ತಿರುವ ಆಕ್ಷೇಪಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು. ಹಿಂದೆ ಸಮೀಕ್ಷೆ ನಡೆಸಲಾಗಿದೆ. ಅದನ್ನು ಕ್ರೋಢೀಕರಿಸಿ ವರದಿ ತಯಾರಿಸಿ, ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದರು.
ಆಯೋಗ ಸಂಗ್ರಹಿಸಿದ ಮಾಹಿತಿ ಅಸ್ಪಷ್ಟವಾಗಿದೆ ಎಂದು ಬಹಳಷ್ಟು ಟೀಕೆಗಳು ಕೇಳಿ ಬರುತ್ತಿವೆ. ಆದರೆ ಅದು ನಮಗೆ ಸಂಬಂಧಿಸಿದ್ದಲ್ಲ. ನಾವು ಸರ್ಕಾರಕ್ಕೆ ವರದಿ ನೀಡುತ್ತೇವೆ. ಅದರ ಬಳಿಕ ವರದಿ ವೈಜ್ಞಾನಿಕವೋ, ಅವೈಜ್ಞಾನಿಕವೋ ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಎಂದರು.
ನಾವು ನಮ್ಮ ಕೆಲಸ ಮಾಡುತ್ತೇವೆ. ವರದಿಯನ್ನು ಸರ್ಕಾರಕ್ಕೆ ನೀಡುತ್ತೇವೆ. ಅಂತಿಮ ತೀರ್ಮಾನವನ್ನು ಸರ್ಕಾರ ತೆಗೆದುಕೊಳ್ಳುತ್ತದೆ. ಮರು ಗಣತಿ ನಡೆಸುವುದು ಸೇರಿದಂತೆ ಎಲ್ಲ ನಿರ್ಧಾರಗಳನ್ನು ಸರ್ಕಾರವೇ ತೆಗೆದುಕೊಳ್ಳಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಮುಖ ಸುದ್ದಿ :-   ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ : ನಿರ್ಧಾರ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ಶಾಸಕ ಯತ್ನಾಳ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement