ಚುನಾವಣೆಗೆ ಮೂರು ದಿನಗಳ ಮೊದಲು ಬಿಜೆಪಿ ನಾಯಕನ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನಕ್ಕೆ ಮೂರು ದಿನಗಳ ಮೊದಲು ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಬಿಜೆಪಿ ನಾಯಕ ರತನ್ ದುಬೆ ಅವರು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು. ಜಿಲ್ಲೆಯ ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ರತನ್‌ ದುಬೆ ಅವರು ಜಿಲ್ಲಾ ಪಂಚಾಯತ ಸದಸ್ಯರಾಗಿದ್ದರು.
ದುಬೆ ಅವರು ಬಿಜೆಪಿ ಪರ ಪ್ರಚಾರ ಮಾಡಲು ಕೌಶಲ್ನಾರ್ ಮಾರುಕಟ್ಟೆ ಪ್ರದೇಶಕ್ಕೆ ಹೋಗಿದ್ದರು ಮತ್ತು ಅವರನ್ನು ಕೊಡಲಿಯಿಂದ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾವೋವಾದಿಗಳು ಇತ್ತೀಚೆಗೆ ಪತ್ರಿಕಾ ಟಿಪ್ಪಣಿಯನ್ನು ಬಿಡುಗಡೆ ಮಾಡಿ ಅವರಿಗೆ ಚುನಾವಣೆಯಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿದ್ದರು.
ಹತ್ಯೆಯ ತನಿಖೆಗಾಗಿ ತಂಡವೊಂದು ಸ್ಥಳಕ್ಕೆ ತಲುಪಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ನವೆಂಬರ್ 7 ರಂದು ಚುನಾವಣೆ ನಡೆಯಲಿರುವ 20 ವಿಧಾನಸಭಾ ಸ್ಥಾನಗಳ ಪೈಕಿ ನಾರಾಯಣಪುರವೂ ಸೇರಿದೆ.

ಪ್ರಮುಖ ಸುದ್ದಿ :-   ಮುಂಬೈ ನಾರ್ತ್ ಸೆಂಟ್ರಲ್ ಕ್ಷೇತ್ರದಿಂದ ಮುಂಬೈ 26/11 ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ವಾದಿಸಿದ್ದ ಉಜ್ವಲ್ ನಿಕಮ್ ಕಣಕ್ಕಿಳಿಸಿದ ಬಿಜೆಪಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement