ಜಾತಿ ನಿಂದನೆ ಆರೋಪ; ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು : ಜಾತಿ ನಿಂದನೆ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ ಕೆರೆಹಳ್ಳಿ ಅವರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಪುನೀತ ಕೆರೆಹಳ್ಳಿ ಅವರು ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ ಮತ್ತು ಅವಾಚ್ಚ ಶಬ್ದಗಳ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಹರೀಶ ಭೈರಪ್ಪ ಎಂಬವರು ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್‌ ಕೆರೆಹಳ್ಳಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ತನ್ನನ್ನು ಬಂಧಿಸಿರುವುದು ಅಕ್ರಮವೆಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಹೈಕೋರ್ಟ್‌ ಮೊರೆ ಹೋಗಿದ್ದ. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿತ್ತು. ವರದಿಯನ್ವಯ ಆದೇಶ ಹೊರಡಿಸಿದ ಸರ್ಕಾರ, ಪುನೀತ್ ಅವರನ್ನು ಬಂಧನಮುಕ್ತಗೊಳಿಸುವಂತೆ ಪೊಲೀಸ್‌ ಇಲಾಖಗೆ ಸೂಚನೆ ನೀಡಿತ್ತು. ನಂತರ ಅವರು ಬಿಡುಗಡೆಗೊಂಡಿದ್ದರು.

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement