
ಬೆಂಗಳೂರು: ಕರ್ನಾಟಕದಲ್ಲಿ ನವೆಂಬರ್ 7ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿರುವ ಹವಾಮಾನ ಇಲಾಖೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ 10 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಒಳನಾಡಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ದಾವಣಗೆರೆ, ರಾಮನಗರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಳ್ಳಾರಿ, ಧಾರವಾಡ, ಹಾವೇರಿ ಮತ್ತು ಗದಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ