ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರು ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆಗ್ನೇಯ ಬೆಂಗಳೂರಿನ ನೈಸ್ ರಸ್ತೆಯ ಚಿಕ್ಕತೋಗೂರಿನ ಲಕ್ಷ್ಮಿ ದೇವಿ ದೇವಸ್ಥಾನದ ಬಳಿಯ ಮನೆಯ ಪಕ್ಕದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಶನಿವಾರ (ನವೆಂಬರ್ 4) ರ ಸಂಜೆ 7:40ರ ಸುಮಾರಿಗೆ ಚಿರತೆ ಮನೆ ಕಂಪೌಂಡ್​​ ಒಳಗೆ ಕಾಣಿಸಿಕೊಂಡಿದ್ದು, ಬಾಗಿಲು ಬಳಿ ಬಂದ ಚಿರತೆ ಕಂಡು ಬಾಲಕ ಕಿರುಚಾಡಿದ್ದಾನೆ, ಕಿರುಚಾಟಕ್ಕೆ ಹೆದರಿ ಚಿರತೆ ಓಡಿ ಹೋಗಿದೆ ಎಂದು ವರದಿಯಾಗಿದೆ.
ಕೆ.ಆರ್.ಪುರಂ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಿಶೀಲನೆ ನಡೆಸಿ ಅರಣ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಚಿಕ್ಕತೋಗೂರು ಸುತ್ತಮುತ್ತ ನೈಸ್ ರಸ್ತೆ ಜಾಗದಲ್ಲಿ ಆಗಾಗ ಚಿರತೆ ಓಡಾಟ ಕಂಡುಬರುತ್ತಿದೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯ ಕೂಡ್ಲುಗೇಟ್‌ ಸುತ್ತ ಮುತ್ತ ಚಿರತೆ ಓಡಾಡುತ್ತಿತ್ತು. ಇಲ್ಲಿನ ಪ್ರತಿಷ್ಠಿತ ಅಪಾರ್ಟ್ ಮೆಂಟ್‌ ಒಂದರಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದರಿಂದ ಸ್ಥಳೀಯರು ಭಯ ಭೀತರಾಗಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಮೂರು ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದ ಕೂಡ್ಲುಗೇಟ್​ನ ಕೃಷ್ಣಾರೆಡ್ಡಿಪಾಳ್ಯದ ಪಾಳುಬಿದ್ದ ಕಟ್ಟಡದಲ್ಲಿ ಸೆರೆ ಹಿಡಿದಿದ್ದರು. ಆದರೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಗಾಯಗೊಂಡಿದ್ದ ಚಿರತೆ ನಂತರ ಮೃತಪಟ್ಟಿತ್ತು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement