ವಿಶ್ವಕಪ್ 2023 : ರೋಹಿತ್‌ ಪಡೆಗಳ ಮುಂದೆ ಮಂಡಿಯೂರಿದ ದಕ್ಷಿಣ ಆಫ್ರಿಕಾ ; ಭಾರತಕ್ಕೆ 243 ರನ್ನುಗಳ ಭರ್ಜರಿ ಗೆಲುವು

ಕೋಲ್ಕತ್ತಾ: ವಿಶ್ವಕಪ್ 2023ರ ಭಾರತವು ದಕ್ಷಿಣ ಆಫ್ರಿಕಾ ವಿರುದ್ಧ 243 ರನ್ ಗಳ ಭಜರ್ರಿ ಗೆಲುವು ಸಾಧಿಸಿದೆ.
ಈಡೆನ್ ಗಾರ್ಡನ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು. ಇದಕ್ಕೆ ಪ್ರತ್ಯುತ್ತರವಾಗಿ ದಕ್ಷಿಣ ಆಫ್ರಿಕಾ ಕೇವಲ 27.1 ಓವರ್‌ಗಳಲ್ಲಿ 83 ರನ್ ಗಳಿಗೆ ಆಲೌಟ್‌ ಆಯಿತು. ಭಾರತದ ಪರ ವಿರಾಟ್ ಕೊಹ್ಲಿ 49ನೇ ಶತಕ ದಾಖಲಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ಗರಿಷ್ಠ 49 ಶತಕಗಳನ್ನು ಸರಿಗಟ್ಟಿದ್ದಾರೆ.
ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಉತ್ತಮ ಆರಂಭವನ್ನು ನೀಡಿದರು. ತಂಡವು 4.3 ಓವರ್‌ಗಳಲ್ಲಿ 50 ರನ್ ಪೂರೈಸಿತು. ರೋಹಿತ್ ಶರ್ಮಾ 24 ಎಸೆತಗಳಲ್ಲಿ 6 ಸ್ಫೋಟಕ ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 40 ರನ್ ಗಳಿಸಿದರು. ಕಗಿಸೊ ರಬಾಡ ರೋಹಿತ್‌ ಶರ್ಮಾರನ್ನು ಔಟ್ ಮಾಡುವ ಮೂಲಕ ಆಫ್ರಿಕಾಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇದಾದ ಬಳಿಕ ಶುಭಮನ್ ಗಿಲ್ ಕೂಡ ದೊಡ್ಡ ಇನ್ನಿಂಗ್ಸ್ ಆಡಲಾಗದೆ 23 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ನಂತರ ವಿರಾಟ್ ಕೊಹ್ಲಿ ಅವರು ಶ್ರೇಯಸ್ ಅಯ್ಯರ್ (77) ಜೊತೆಗೂಡಿ ಇನ್ನಿಂಗ್ಸ್ ಕೈಗೆತ್ತಿಕೊಂಡು ಸ್ಕೋರ್ ಹೆಚ್ಚಿಸಿದರು. ನಂತರ ಸೂರ್ಯಕುಮಾರ ಯಾದವ ಹಾಗೂ ರವೀಂದ್ರ ಜಡೇಜಾ ಅಜೇಯ ರನ್‌ಗಳಿಸಿ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ ; ಮತ್ತೊಂದು ಕ್ಷೇತ್ರದಿಂದಲೂ ರಾಹುಲ್‌ ಗಾಂಧಿ ಸ್ಪರ್ಧೆ

ಅಯ್ಯರ್ 87 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸ್ಫೋಟಕ ಸಿಕ್ಸರ್‌ಗಳೊಂದಿಗೆ 77 ರನ್ ಗಳಿಸಿ ಲುಂಗಿ ಎನ್‌ಗಿಡಿ ಎಸೆತದಲ್ಲಿ ಮಾರ್ಕ್‌ರಾಮ್‌ಗೆ ಕ್ಯಾಚಿತ್ತು ಔಟಾದರು. ಇದಾದ ಬಳಿಕ ಕೆಎಲ್ ರಾಹುಲ್ 8 ರನ್ ಗಳಿಸಿ ಔಟಾದರು. ಸೂರ್ಯಕುಮಾರ ಯಾದವ್ 14 ಎಸೆತಗಳಲ್ಲಿ 22 ರನ್ ಹಾಗೂ ರವೀಂದ್ರ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 29 ರನ್ ಗಳಿಸಿದ್ದರಿಂದ ತಂಡ ಅಂತಿಮವಾಗಿ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತು.
ಟೀಂ ಇಂಡಿಯಾ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ಪೆವಿಲಿಯನ್ ಪರೇಡ್ ನಡೆಸಿದರು. ದಕ್ಷಿಣ ಆಫ್ರಿಕಾ ನಾಯಕ ತೆಂಬಾ ಬವುಮಾ 11, ದುಸೇನ್ 13, ಡೇವಿಡ್ ಮಿಲ್ಲರ್ 11 ಮತ್ತು ಜಾನ್ಸೆನ್ 14 ರನ್ ಗಳಿಸುವ ಮೂಲಕ ಎರಡಂಕಿ ತಲುಪಿದ್ದಾರೆ. ಕ್ವಿಂಟನ್‌ ಡಿ ಕಾಕ್‌ ಸೇರಿದಂತೆ ಉಳಿದವರ್ಯಾರೂ ಎರಡಂಕಿ ಮೊತ್ತ ತಲುಪಲಿಲ್ಲ. ಭಾರತದ ಪರ ಬೌಲಿಂಗ್ ನಲ್ಲಿ ರವೀಂದ್ರ ಜಡೇಜಾ 5, ಮೊಹಮ್ಮದ್ ಶಮಿ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಪಡೆದಿದ್ದಾರೆ. ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

ಪ್ರಮುಖ ಸುದ್ದಿ :-   ವೀಡಿಯೊ...| ಶಿವಸೇನೆ ನಾಯಕಿ ಕರೆದೊಯ್ಯಲು ಬಂದಿದ್ದ ಹೆಲಿಕಾಪ್ಟರ್ ಅಪಘಾತ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement