ಪ್ರತಿಮಾ ಕೊಲೆ ಪ್ರಕರಣ: ಆರೋಪಿ ಕಿರಣ್ ನವೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣನನ್ನು ಬೆಂಗಳೂರಿನ 2ನೇ ಎಸಿಎಂಎಂ (ACMM) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಆರೋಪಿಯನ್ನು ನವೆಂಬರ್ 15ರ ವರೆಗೆ ಪೊಲೀಸ್ ಕಸ್ಟಡಿ ನೀಡಿ ಆದೇಶಿಸಿದೆ.
ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣನನ್ನು ಬೆಂಗಳೂರು ಪೊಲೀಸರು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದಾಗ ಆರೋಪಿಯನ್ನು 11 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೋರ್ಟ್ 10 ದಿನಗಳ ಕಾಲ ಕಸ್ಟಡಿಗೆ ನೀಡಿದೆ.
ಸುಬ್ರಮಣ್ಯಪುರ ಪೊಲೀಸರು ಪ್ರತಿಮಾ ಕೊಲೆಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು ಈ ವೇಳೆ ತಾನೇ ಕೊಲೆ ಮಾಡಿರುವುದಾಗಿ ಕಿರಣ್ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರಾಹುಲ್ ಕುಮಾರ ತಿಳಿಸಿದ್ದಾರೆ.
ಪೊಲೀಸ್ ವಿಚಾರಣೆ ವೇಳೆ ಪ್ರತಿಮಾ ಒಂದು ವಾರದ ಹಿಂದೆ ಕಿರಣ್​ನನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾ ಒಬ್ಬರೇ ವಾಸಿಸುತ್ತಿದ್ದರು. ಕಳೆದ ರಾತ್ರಿ ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದರು.

ಪ್ರಮುಖ ಸುದ್ದಿ :-   ಐಸಿಸ್‌ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ: ಯತ್ನಾಳ ಆರೋಪ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement