ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ಟ್ರಫ್‌ ನಿರ್ಮಾಣವಾಗಿದೆ. ಹೀಗಾಗಿ ಅದರ ಪ್ರಭಾವದಿಂದಾಗಿ ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವಡೆ ಜೋರಾಗಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಅಲ್ಲದೆ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಕೋಲಾರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.
ಭಾನುವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

advertisement