ಗಣಿ-ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಕೊಲೆ ಪ್ರಕರಣ : ಮಾಜಿ ಕಾರು ಚಾಲಕ ವಶಕ್ಕೆ

ಬೆಂಗಳೂರು: ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಅಧಿಕಾರಿ ಪ್ರತಿಮಾ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎನ್ನಲಾಗಿದೆ.
ಬಂಧಿತ ವ್ಯಕ್ತಿಯನ್ನು ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣ ಎಂದು ಹೇಳಲಾಗಿದ್ದು, ಮೂಲಗಳ ಪ್ರಕಾರ ಈತ ಪ್ರತಿಮಾ ಅವರ ಮಾಜಿ ಚಾಲಕ ಹಾಗೂ ಗುತ್ತಿಗೆ ಆದಾರದಲ್ಲಿ ಕೆಲಸಕ್ಕಿದ್ದ ಈತನನ್ನು ಕೆಲವು ದಿನಗಳ ಹಿಂದೆ ಆತನನ್ನು ಕೆಲಸದಿಂದ ತೆಗೆಯಲಾಗಿತ್ತು ಎನ್ನಲಾಗಿದೆ.
ಕೆಲ ವಿಚಾರಗಳಿಗೆ ಪ್ರತಿಮಾ ಅವರಿಗೆ ಈತನ ಮೇಲೆ ಅಸಮಾಧಾನ ಉಂಟಾಗಿತ್ತು, ಹೀಗಾಗಿ ಕೆಲಸದಿಂದ ವಜಾಗೊಳಿಸಲಾಗಿತ್ತು ಎನ್ನಲಾಗಿದೆ. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಕೋಪಗೊಂಡಿದ್ದ ಕಿರಣ್ ಈ ಕೃತ್ಯ ವೆಸಗಿರಬಹುದು ಎಂದು ಶಂಕಿಸಲಾಗಿದೆ. ಈತನ ಜೊತೆ ಮತ್ಯಾರಾದರೂ ಇದ್ದಾರೆಯೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ಆತ ಬೆಂಗಳೂರಿನಿಂದ 200 ಕಿ.ಮೀ ದೂರದಲ್ಲಿರುವ ಚಾಮರಾಜನಗರಕ್ಕೆ ಪರಾರಿಯಾಗಿದ್ದ ಮಲೆಮಹದೇಶ್ವರ ಬೆಟ್ಟದ ಕಡೆ  ಈತನನ್ನು ವಶಕ್ಕೆ ಪಡೆಯಲಾಗಿದೆ ಎಂದು  ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಮುಖ ಸುದ್ದಿ :-   ಸಮ ಸಮಾಜ ನಿರ್ಮಾಣ, ಅಂತರಂಗ-ಬಹಿರಂಗ ಶುದ್ಧಿಯಿಂದ ಜಗಜ್ಯೋತಿಯಾದ ಕಾಯಕಯೋಗಿ ವಿಶ್ವಗುರು ಬಸವಣ್ಣ...

ಸದ್ಯ ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ಬೆಂಗಳೂರಿನ ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‌ ನಲ್ಲಿ ಗಣಿ-ಭೂವಿಜ್ಞಾನ ಇಲಾಖೆಯ ಅಧಿಕಾರಿ ಪ್ರತಿಮಾರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಶನಿವಾರ ಮಹಿಳಾ ಅಧಿಕಾರಿ ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಕೊಲೆ ಮಾಡಿ ಪರಾರಿಯಾಗಿದ್ದರು. ಪ್ರತಿಮಾ ಅವರ ದೇಹವು ಗಂಟಲು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ – ಭಾನುವಾರ ಬೆಳಿಗ್ಗೆ 8:30 ರ ಸುಮಾರಿಗೆ ಆಕೆಯ ಸಹೋದರ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಪತ್ತೆಯಾಗಿದೆ. ಪ್ರಾಥಮಿಕ ವಿಚಾರಣೆಯ ಪ್ರಕಾರ, ಅವರು ಶನಿವಾರ ಸಂಜೆ 6 ಗಂಟೆಯವರೆಗೆ ಕಚೇರಿಯಲ್ಲಿದ್ದರು, ನಂತರ ಕಿರಣ್ ಬದಲಿಗೆ ನೇಮಕಗೊಂಡ ಚಾಲಕ ಅವರನ್ನು ಮನೆಗೆ ಡ್ರಾಪ್ ಮಾಡಿದ್ದಾರೆ.ಅದರ ನಂತರ ಅವರ ಕೊಲೆ ನಡೆದಿತ್ತು.
ಪ್ರತಿಮಾ ದೊಡ್ಡಕಲ್ಲಸಂದ್ರದ ಕುವೆಂಪು ನಗರದಲ್ಲಿ ಒಂಟಿಯಾಗಿ ವಾಸವಾಗಿದ್ದರು. ಪತಿ ಮತ್ತು ಮಗ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನೆಲೆಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement