ಬೆಂಗಳೂರು : ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಲಿವ್​ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪ್ರೇಮಿಗಳು

ಬೆಂಗಳೂರು: ಲಿವ್-ಇನ್ ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದ ಇಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ 20 ವರ್ಷದಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ (ವಿವಾಹಿತೆ) ಹಾಗೂ ಆಕೆಯ 29 ವರ್ಷದ ಲಿವ್-ಇನ್ ಪಾಲುದಾರ ಭಾನುವಾರ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕರಿಯಮ್ಮ ಅಗ್ರಹಾರ ನಿವಾಸಿ ಸೌಮಿನಿ ದಾಸ್‌ ಹಾಗೂ ಅಭಿಲ್‌ ಅಬ್ರಾಹಂ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಮೃತ ಸೌಮಿನಿ ದಾಸ್ ಪಶ್ಚಿಮ ಬಂಗಾಳ ರಾಜ್ಯದವರಾಗಿದ್ದ, ಕರಿಯಮ್ಮ ಅಗ್ರಹಾರ ಸಮೀಪದ ಖಾಸಗಿ ಕಾಲೇಜಿನಲ್ಲಿ 2ನೇ ವರ್ಷದ ನರ್ಸಿಂಗ್ ಓದುತ್ತಿದ್ದಳು. ಎರಡು ವರ್ಷಗಳ ಹಿಂದೆಯೇ ಆಕೆಗೆ ವಿವಾಹವಾಗಿತ್ತು. ನರ್ಸ್‌ ಸರ್ವೀಸ್ ಏಜೆನ್ಸಿ ನಡೆಸುತ್ತಿದ್ದ ಕೇರಳ ಮೂಲದ ಅಬ್ರಾಹಂಗೆ ಕೆಲ ತಿಂಗಳ ಹಿಂದೆ ಸೌಮಿನಿ ದಾಸ್‌ಗೆ ಪರಿಚಯವಾಗಿದೆ. ಕಾಲೇಜಿಗೆ ರಜೆ ಅಥವಾ ಬಿಡುವಿನ ವೇಳೆಯಲ್ಲಿ ಅಬ್ರಾಹಂ ಏಜೆನ್ಸಿಯಲ್ಲಿ ಸೌಮಿನಿ ದಾಸ್ ಕೆಲಸ ಮಾಡುತ್ತಿದ್ದಳು.

ಮೂರು ತಿಂಗಳ ಹಿಂದೆಯಷ್ಟೇ ತಮ್ಮೂರಿಗೆ ಹೋಗಿದ್ದ ಸೌಮಿನಿ, ಪುನಃ ಬೆಂಗಳೂರಿಗೆ ವಾಪಸು ಬಂದಿದ್ದರು. ನಿನ್ನ ಜೊತೆ ನಾನು ಇರುವುದಿಲ್ಲ. ನನ್ನ ತಂಟೆಗೆ ಬರಬೇಡ. ನಾನು ಊರಿಗೂ ಬರುವುದಿಲ್ಲ ಎಂದು ತಮ್ಮ ಪತಿಗೆ ಹೇಳಿದ್ದಳು ಎನ್ನಲಾಗಿದೆ.
ಹೀಗಾಗಿ ಸೌಮಿನಿ ಬಗ್ಗೆ ಅನುಮಾನಗೊಂಡ ಆಕೆಯ ಪತಿ, ಈ ಬಗ್ಗೆ ವಿಚಾರಿಸಿದಾಗ ಆಕೆ ಅಬಿಲ್ ಜೊತೆ ಸಹಜೀವನ ನಡೆಸುತ್ತಿದ್ದ ಸಂಗತಿ ಗೊತ್ತಾಗಿತ್ತು. ಈ ಬಗ್ಗೆ ಪತ್ನಿಯನ್ನು ತರಾಟೆಗೆ ತೆಗೆದುಕೊಂಡಿದ್ದ. ನಮ್ಮ ಪ್ರೀತಿಯ ವಿಷಯ ಬೇರೆಯವರಿಗೆ ಗೊತ್ತಾಗಿದ್ದರಿಂದ ಭಯಗೊಂಡ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಬೆಂಕಿ ಹಚ್ಚಿಕೊಂಡಿದ್ದ ಸಂದರ್ಭದಲ್ಲಿ ಇಬ್ಬರೂ ಕೂಗಾಟ ಕೇಳಿ. ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದರು. ಅಷ್ಟರಲ್ಲೇ ಇಬ್ಬರ ದೇಹ ಬಹುಪಾಲು ಸುಟ್ಟಿತ್ತು. ಸೌಮಿನಿ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರೆ ಇನ್ನೂ ಉಸಿರಾಡುತ್ತಿದ್ದ ಅಬಿಲ್ ಅವರನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.
ಸುದ್ದಿ ತಿಳಿದು ಕೊತ್ತನೂರು ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಮುಖ ಸುದ್ದಿ :-   ವಂಚನೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ಚೈತ್ರಾ ಬಿಡುಗಡೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement